ಕುಕ್ಕೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

Published : Apr 30, 2019, 11:20 AM IST
ಕುಕ್ಕೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಚಿನ್ನದ ರಥ ನೀಡುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ | ಚಿನ್ನದ ರಥ ನೀಡುವ ಸಂಬಂಧ 2005 ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. 

ಬೆಂಗಳೂರು (ಏ. 30): ರಾಜ್ಯದ ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಚಿನ್ನದ ರಥ ನೀಡುವ ಸಂಬಂಧ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಸೇರಿ ಎಲ್ಲಾ ಅಂದಾಜುಗಳನ್ನು ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕುಕ್ಕೆ ರಥಕ್ಕೆ ಸರ್ಕಾರದಿಂದ ಚಿನ್ನ ಲೇಪನ: ಜ್ಯೋತಿಷಿ ಸಲಹೆ ಜಾರಿಗೆ ಸಿಎಂ ಸೂಚನೆ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಚಿನ್ನದ ರಥ ನೀಡುವ ಸಂಬಂಧ 2005 ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. ಅಂದಿನ ದಿನದಲ್ಲಿ 15 ಕೋಟಿ ರು. ವೆಚ್ಚದಲ್ಲಿ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ದೇವಾಲಯದಲ್ಲಿ ಲಭ್ಯ ಇರುವ ಚಿನ್ನ ಬಳಸಿಕೊಂಡು, ಉಳಿದ ಚಿನ್ನವನ್ನು ಬ್ಯಾಂಕ್ನ ಮೂಲಕ ಖರೀದಿಸಲು ಸರ್ಕಾರ ಸಮ್ಮತಿ ನೀಡಿತ್ತು. ಆದರೆ, ರಥ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಳಸದೆ ಸಾರ್ವಜನಿಕರ ದೇಣಿಗೆ ಸಂಗ್ರಹ ಮತ್ತು ದೇವಾಲಯದ ಸಂಪನ್ಮೂಲಗಳಿಂದಲೇ ರಥ ನಿರ್ಮಾಣದ ವೆಚ್ಚ ಭರಿಸುವಂತೆ ತಿಳಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ ಯು ವಿವರಣೆ ನೀಡಿದೆ.

ಇತ್ತೀಚೆಗೆ ಭಕ್ತರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನೆನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಸೇರಿ ಎಲ್ಲಾ ಅಂದಾಜು ಮೊತ್ತವನ್ನು ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ