
ಬೆಂಗಳೂರು : ಇನ್ನು ಮುಂದೆ ಸಾರ್ವಜನಿಕರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶನಿವಾರ ಮಾತ್ರ ಭೇಟಿ ಮಾಡಬಹುದು. ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಇರುವ ಸಂದರ್ಭಗಳಲ್ಲಿ ಪ್ರತಿ ಶನಿವಾರ ಮಾತ್ರ ಬೆಳಿಗ್ಗೆ 11ರಿಂದ ಸಂಜೆ 4.30ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಅವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಅನಿಯಮಿತವಾಗಿ ಸಾರ್ವಜನಿಕರು ಮುಖ್ಯಮಂತ್ರಿಯವರ ಜೆ.ಪಿ.ನಗರದ ನಿವಾಸ, ಗೃಹ ಕಚೇರಿ ಕೃಷ್ಣಾ ಹಾಗೂ ವಿಧಾನಸೌಧಕ್ಕೆ ಭೇಟಿ ನೀಡುತ್ತಿರುವುದರಿಂದ ಮುಖ್ಯಮಂತ್ರಿಗಳ ಕೆಲಸ ಕಾರ್ಯಗಳಿಗೆ ಹಾಗೂ ನಿಗದಿತ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಸಕಾಲಕ್ಕೆ ಭಾಗವಹಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸಾರ್ವಜನಿಕ ಭೇಟಿಗೆ ಸಮಯವನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
ಈ ಭೇಟಿಯ ಸಂದರ್ಭದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. ಅಲ್ಲದೆ, ಖಾಸಗಿ ಅಹವಾಲುಗಳಿಗೂ ಅವಕಾಶವಿರುವುದಿಲ್ಲ. ವೈದ್ಯಕೀಯ ಪರಿಹಾರ ನಿಧಿಗೆ ಕೋರಿಕೆ ಸಲ್ಲಿಸುವವರು ಆಧಾರ್ ಕಾರ್ಡ್ ಅಥವಾ ಬಿಪಿಎಲ… ಕಾರ್ಡ್, ಆಸ್ಪತ್ರೆಯ ಬಿಲ್ಲುಗಳು ಮತ್ತು ಚಿಕಿತ್ಸೆಯ ವಿವರಗಳ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾತ್ರ ಸಾರ್ವಜನಿಕರು ಲಿಖಿತ ಮನವಿಗಳನ್ನು ಸಲ್ಲಿಸಬೇಕು. ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ತೆಗೆದುಕೊಳ್ಳಲಾದ ಕ್ರಮಗಳನ್ನು ಮೊಬೈಲ… ಎಸ್‌ಎಂಎಸ್ ಮೂಲಕ ಮಾಹಿತಿ ಒದಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.