
ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ನೂತನ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿದ್ದಾರೆ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಕುರಿತು ಪರ-ವಿರೋಧ ಚರ್ಚೆ ಆರಂಭವಾಗಿದೆ. ಅದರಲ್ಲೂ ಬಜೆಟ್ ನಲ್ಲಿ ಪ್ರಾಂತ್ಯವಾರು ತಾರತಮ್ಯ ಎದ್ದು ಕಾಣುತ್ತಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಮಧ್ಯೆ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಹಲವು ವಿನೂತನ ಆಕರ್ಷಕ ಯೋಜನೆಗಳೂ ಇದ್ದು, ಪ್ರಮುಖವಾಗಿ ಬಡ ಬ್ರಾಹ್ಮಣರಿಗೂ ಆರ್ಥಿಕ ನೆರವು ನೀಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ.
ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ಒದಗಿಸಲು ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಈ ಹಿನ್ನೆಲೆಯಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಈ ಮೂಲಕ ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ 25 ಕೋಟಿ ರೂ. ಮೀಸಲಿರಿಸಲಾಗಿದ್ದು, ಈ ಮಂಡಳಿ ಮೂಲಕ ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕುಮಾರಸ್ವಾಮಿ ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.