
ಬೆಂಗಳೂರು(ಸೆ.13): ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಹವಾ ಕಡಿಮೆ ಮಾಡೋಕೆ ಕುಮಾರಸ್ವಾಮಿ ಜಾಣನಡೆ ಪ್ರದರ್ಶಿಸಿದ್ದಾರೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ತಂತ್ರ ರೂಪಿಸಿರುವ ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆ ವಿಭಜನೆಯ ಪ್ರಸ್ತಾವನೆ ಬಳಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ಜಿಲ್ಲೆಯನ್ನು ವಿಭಜನೆ ಮಾಡುವಂತೆ ಹೋರಾಟ ಮಾಡುತ್ತಿರುವ ಹೋರಾಟಗಾರರು ಇದ್ದಕ್ಕಿದ್ದಂತೆ ಸಕ್ರಿಯಗೊಳ್ಳಲು ಕಾರಣವೇನು ಎಂಬ ಪ್ರಶ್ನೆ ಇದೀಗ ಉದ್ಭವವಾಗಿದ್ದು, ಸಿಎಂ ಕುಮಾರಸ್ವಾಮಿ ಸೈಲೆಂಟಾಗಿ ತೆರೆಮರೆಯಲ್ಲೇ ಕಾರ್ಯತಂತ್ರ ರೂಪಿಸುತ್ತಿದ್ದಾರಾ ಎಂಬ ಗುಮಾನಿ ಎದ್ದಿದೆ.
"
ಸಿಎಂ ಕುಮಾರಸ್ವಾಮಿ ಶನಿವಾರ ಬೆಳಗಾವಿಗೆ ಭೇಟಿ ನೀಡಲಿದ್ದು, ಈ ವೇಳೆಯಲ್ಲಿಯೇ ವಿಭಜನೆ ಕೂಗು ಜೋರಾಗಲಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೋರಾಟಗಾರ ಸಂಗಪ್ಪಗೋಳ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.