ಬಿಜೆಪಿ-ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ 'ಎತ್ತಿನಹೊಳೆ' ಸಭೆ ಬಲಿ

By Suvarna Web DeskFirst Published Dec 26, 2016, 11:34 AM IST
Highlights

ಎತ್ತಿನಹೊಳೆ ಯೋಜನೆ ಸಮಸ್ಯೆ ಪರಿಹರಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕ

ಬೆಂಗಳೂರು (ಡಿ. 26): ಎತ್ತಿನಹೊಳೆ ಯೋಜನೆ ಸಮಸ್ಯೆ ಪರಿಹರಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಸಭೆ ಬಲಿಯಾಗಿದೆ.

ಯೋಜನೆ ಅನುಮೋದನೆ ಸಂಬಂಧ ಉಭಯ ಪಕ್ಷಗಳ ನಾಯಕರ ನಡುವೆ ವಾಗ್ವಾದ ನಡೆದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಯೋಜನೆಗೆ ಅನುಮೋದನೆ ದೊರೆತಿದ್ದು, ಈಗ ಕಾಂಗ್ರೆಸ್ ಸರ್ಕಾರ ಮುಂದುವರೆಸುತ್ತಿದೆ ಎಂದು ಸರ್ಕಾರದ ಪರವಾಗಿ ಸಚಿವರಾದ ಎಂ.ಬಿ. ಪಾಟೀಲ್, ಮತ್ತು ರಮಾನಾಥರೈ ವಾದಮಾಡಿದರು.

ಯೋಜನೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಹೇಳುವಷ್ಟು ನೀರು ಬರುವುದಿಲ್ಲ. ಸರ್ಕಾರ ಕರಾವಳಿ ಮತ್ತು ಬಯಲು ಸೀಮೆಯ ಎರಡೂ ಕಡೆಯ ಜನರಿಗೆ ಮಂಕು ಬೂದಿ ಎರಚುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ವಾದ ಮಾಡಿದ್ದಾರೆ. ಆದ್ರೆ, ಸರ್ಕಾರ ಯೋಜನೆಯನ್ನು ಮುಂದುವರೆಸುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದು, ಅಗತ್ಯ ಬಿದ್ದರೆ, ಕರಾವಳಿ ಭಾಗದ ಜನರ ಜೊತೆಗೂ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.

click me!