ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ

Published : Feb 24, 2017, 04:35 AM ISTUpdated : Apr 11, 2018, 01:12 PM IST
ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ

ಸಾರಾಂಶ

ನಿನ್ನೆ ತಮ್ಮ ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್​ ಅವರಿಗೆ ಸೇರಿದ  ಡೈರಿ ಬಹಿರಂಗವಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡುವ ನಿರೀಕ್ಷೆಯಿತ್ತು. ಆದರೆ ಇಡೀ ದಿನ ತಮ್ಮ ಅಧಿಕೃತ ನಿವಾಸದಲ್ಲೇ ಇದ್ದ ಸಿಎಂ ಯಾರಿಗೂ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ.

ಬೆಂಗಳೂರು(ಫೆ.24): ಹೈಕಮಾಂಡ್​ಗೆ ಕಪ್ಪ ಕೊಟ್ಟ ವಿಚಾರವಾಗಿ  ಸಿಎಂ ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್​ ಅವರ ಡೈರಿಯಲ್ಲಿನ ಅಂಶಗಳು ಬಹಿರಂಗವಾದ ಹಿನ್ನೆಲೆಯಲ್ಲಿ ಇಂದು ಸಿದ್ಧರಾಮುಯ್ಯ ಸಂಪೂರ್ಣ ಮೌನ ಕಾಯ್ದುಕೊಂಡರು. ಬೆಂಬಲಿಗರು ಮತ್ತು ಮಾಧ್ಯಮಕ್ಕೆ ಭೇಟಿಗೆ ಆಸ್ಪದ ನೀಡದ ಸಿಎಂ, ಶಿವರಾತ್ರಿ ಹಿನ್ನೆಲೆಯಲ್ಲಿ  ತರಾತುರಿಯಲ್ಲಿ ದೇವರ ದರ್ಶನ ಮಾಡಿ ಯಾವುದೇ ಬೆಂಗಾವಲು ವಾಹನವಿಲ್ಲದೆ ಖಾಸಗಿಯಾಗಿ ಅಜ್ಞಾತ ಸ್ಥಳಕ್ಕೆ ತೆರಳಿದರು.

ನಿನ್ನೆ ತಮ್ಮ ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್​ ಅವರಿಗೆ ಸೇರಿದ  ಡೈರಿ ಬಹಿರಂಗವಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡುವ ನಿರೀಕ್ಷೆಯಿತ್ತು. ಆದರೆ ಇಡೀ ದಿನ ತಮ್ಮ ಅಧಿಕೃತ ನಿವಾಸದಲ್ಲೇ ಇದ್ದ ಸಿಎಂ ಯಾರಿಗೂ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ.

ಸಿಎಂ ಭೇಟಿಗೆ ಆಗಮಿಸಿದ್ದ ಶಾಸಕರಾದ ವಸಂತ ಬಂಗೇರ, ವಿಜಯಾನಂದ ಕಾಶಪ್ಪನವರ್ ಮತ್ತು ರಾಜ್ಯಸಭಾ ಸದಸ್ಯ ರಾಜೀವ್​ ಗೌಡ  ಬರಿಗೈಯಲ್ಲಿ ವಾಪಸಾಗಬೇಕಾಯ್ತು.

ಸಂಜೆ ಏಳು ಗಂಟೆಗೆ ಶಿವರಾತ್ರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳಬೇಕಿದ್ದ ಸಿಎಂ ಮೂರು ಗಂಟೆ ಮುಂಚಿತವಾಗಿಯೇ ಅದನ್ನು ಮುಗಿಸಿಬಿಟ್ಟು ಕೇವಲ 15 ನಿಮಿಷದಲ್ಲಿ ದೇವಸ್ಥಾನಕ್ಕೆ ತೆರಳಿ ಮತ್ತೆ ಅಧಿಕೃತ ನಿವಾಸಕ್ಕೆ ವಾಪಸಾದರು.

ದೇವಸ್ಥಾನದಿಂದ ವಾಪಸಾದ ಸಿಎಂ ಮತ್ತೆ ಐದೇ ನಿಮಿಷಗಳ ಅಂತರದಲ್ಲಿ ಖಾಸಗಿ ವಾಹನದಲ್ಲಿ ತಮ್ಮ ಆಪ್ತ ಶಾಸಕರೊಬ್ಬರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದರು. ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಎಲ್ಲೂ ಕೂಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಸಿಎಂ ಸಂಪೂರ್ಣ ಅಂತರ ಕಾಯ್ದುಕೊಂಡರು.

ವರದಿ: ಕಿರಣ್​  ಹನಿಯಡ್ಕ, ಸುವರ್ಣ ನ್ಯೂಸ್​.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?