
ದಾವಣಗೆರೆ [ಜು.3] : ಈಗಲೂ ಬಿಜೆಪಿಯವರು ನನ್ನ ಬೆನ್ನು ಹತ್ತಿದ್ದು, ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು. ಯಾರಾದರೂ ಮುಖ್ಯಮಂತ್ರಿಯಾಗಬಹುದು. ರಾಜ್ಯದಲ್ಲಿರುವ ಮೈತ್ರಿ ಸರ್ಕಾರಕ್ಕೆ ಮಾತ್ರ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ರಾಮಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಇಬ್ಬರು ಅತೃಪ್ತ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗಲ್ಲ. ಮಧ್ಯಂತರ ಚುನಾವಣೆಯೂ ಕೂಡ ನಡೆಯುವುದಿಲ್ಲ ಎಂದರು.
ನನ್ನ ಆಯ್ಕೆ ಮಾಡಿದ ಜನತೆಗೆ ಮೋಸ ಮಾಡಿ ಹೋಗಲಾರೆ. ಪಕ್ಷ ತ್ಯಜಿಸುವ ಮಾತೇ ಇಲ್ಲ ಎಂದು ಶಾಸಕ ರಾಮಪ್ಪ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.