ಅಂಗನವಾಡಿ ಕಾರ್ಯಕರ್ತೆಯರ ಧರಣಿ: ನಾಳೆ ಸಿಎಂ ಮತ್ತೊಂದು ಸುತ್ತಿನ ಮಾತುಕತೆ

Published : Mar 21, 2017, 12:41 PM ISTUpdated : Apr 11, 2018, 12:34 PM IST
ಅಂಗನವಾಡಿ ಕಾರ್ಯಕರ್ತೆಯರ ಧರಣಿ: ನಾಳೆ ಸಿಎಂ ಮತ್ತೊಂದು ಸುತ್ತಿನ ಮಾತುಕತೆ

ಸಾರಾಂಶ

ಪ್ರತಿಭಟನಾ ಸ್ಥಳಕ್ಕೆ ಕುಡಿಯವ ನೀರು, ಆ್ಯಂಬುಲೆನ್ಸ್, ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸಚಿವೆ ಉಮಾಶ್ರೀಯವರಿಗೆ ಸಿಎಂ ಸೂಚನೆ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನಿಯೋಜಸಲು ತಿಳಿಸಿದ್ದಾರೆ.

ಬೆಂಗಳೂರು(ಮಾ.23): ತಮ್ಮ ಹಲವು ಬೇಡಿಕೆಗಳಿಗಾಗಿ ಕಳೆದ 2 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಸಂಬಂಧಿಸಿದಂತೆ ನಾಳೆ ಕಾರ್ಯಕರ್ತೆಯರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಇಂದು ಸಹ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಮಾತೆಕತೆ ನಡೆಸಿ ಬೇಡಿಕೆ ಈಡೇರಿಕೆಗೆ ಭರವಸೆ ನೀಡಿದ್ದರು. ಆದರೆ ತಕ್ಷಣವೇ ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದರಿಂದ ಮಾತುಕತೆ ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಕುಡಿಯವ ನೀರು, ಆ್ಯಂಬುಲೆನ್ಸ್, ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸಚಿವೆ ಉಮಾಶ್ರೀಯವರಿಗೆ ಸಿಎಂ ಸೂಚನೆ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನಿಯೋಜಸಲು ತಿಳಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿದ್ದು,ಸರ್ಕಾರ ಕೂಡಲೇ ಕಾರ್ಯಕರ್ತೆಯರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ವೇಯನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಬಂದಿರುವ 10 ಸಾವಿರಕ್ಕೂ ಅಂಗನವಾಡಿ ಕಾರ್ಯಕರ್ತೆಯರು ನಿನ್ನೆಯಿಂದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ. ತಿಮ್ಮಾಪೂರ