
ತುಮಕೂರು (ಮಾ.09): ತುಮಕೂರಿನಲ್ಲಿ ವಿಷಾಹಾರ ಸೇವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಖಾಸಗಿ ವಸತಿಶಾಲೆಯಲ್ಲಿ 3 ಮಕ್ಕಳು ಸಾವಿಗೀಡಾದ ಘಟನೆ ಆಘಾತ ತಂದಿದೆ. ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ದ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರಿನ ಚಿಕ್ಕನಾಯಕನ ಹಳ್ಳಿಯಲ್ಲಿವ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಐವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು.
ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.
ಮೃತ ವಿದ್ಯಾರ್ಥಿಗಳನ್ನು ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ
ಮಾಜಿ ಶಾಸಕನ ಬಂಧನ:
ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಾಲೆಯ ಮಾಲಕ ಹಾಗೂ ಬಿಜೆಪಿ ಮಾಜಿ ಶಾಸಕ ಕಇರಣ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯ: ಶಾಲಾ ಮಾ
ವಿಷಾಹಾರ ಸೇವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕಿರಣ್ ಕುಮಾರ್, ಯಾರೋ ಕಿಡಿಗೇಡಿಗಳು ಮಕ್ಕಳ ಆಹಾರಕ್ಕೆ ವಿಷ ಹಾಕಿರಬಹುದು ಎಂದಿದ್ದಾರೆ.
ಹಾಸ್ಟೆಲ್’ನಲ್ಲಿ ತಯಾರಿಸಿದ ಊಟವನ್ನೇ ನಾವೂ ತಿನ್ನುತ್ತೇವೆ, ಈಗ ಹೋಗಿ ನಮ್ಮ ಮನೆಯಲ್ಲಿ ಪರಿಶೀಲಿಸಿದರೂ ಹಾಸ್ಟೆಲ್ ಊಟ ಇರುತ್ತೆ, ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.