ಪೇಜಾವರ ಶ್ರೀಗಳು ಮಧ್ಯಪ್ರವೇಶಿಸಬಾರದು; ಎಂ ಬಿ ಪಾಟೀಲ್ ಆಕ್ಷೇಪ

Published : Jul 25, 2017, 04:56 PM ISTUpdated : Apr 11, 2018, 12:56 PM IST
ಪೇಜಾವರ ಶ್ರೀಗಳು ಮಧ್ಯಪ್ರವೇಶಿಸಬಾರದು; ಎಂ ಬಿ ಪಾಟೀಲ್ ಆಕ್ಷೇಪ

ಸಾರಾಂಶ

ವೀರಶೈವ ಮತ್ತು ಲಿಂಗಾಯತ ಸಮಾಜಗಳೆರಡೂ ಹಿಂದೂ ಧರ್ಮದ ಬಲಿಷ್ಠ ಭಾಗಗಳಾಗಿದ್ದು, ಈಗ ಅವೆರಡು ಪ್ರತ್ಯೇಕ ಧರ್ಮ ಮಾಡುವ ಪ್ರಸ್ತಾಪ ಕೈಬಿಡಬೇಕು ಎಂದು ಉಡುಪಿಯ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ. 

ಉಡುಪಿ (ಜು.25): ವೀರಶೈವ ಮತ್ತು ಲಿಂಗಾಯತ ಸಮಾಜಗಳೆರಡೂ ಹಿಂದೂ ಧರ್ಮದ ಬಲಿಷ್ಠ ಭಾಗಗಳಾಗಿದ್ದು, ಈಗ ಅವೆರಡು ಪ್ರತ್ಯೇಕ ಧರ್ಮ ಮಾಡುವ ಪ್ರಸ್ತಾಪ ಕೈಬಿಡಬೇಕು ಎಂದು ಉಡುಪಿಯ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿಯವರ ಮಾತುಗಳಿಗೆ ರಾಜಕೀಯ ನಾಯಕರು ಟಾಂಗ್ ನೀಡಿದ್ದಾರೆ. ಲಿಂಗಾಯಿತ ಪ್ರತ್ಯೇಕ ಧರ್ಮಕ್ಕೆ ನಮ್ಮ ಬೆಂಬಲವಿದೆ. ಪೇಜಾವರ ಶ್ರೀಗಳು ಮಧ್ಯಪ್ರವೇಶಿಸುವುದು ಸಾಧುವಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ನಮ್ಮ ಸಮುದಾಯದ ಸ್ವಾಮಿಗಳಿದ್ದಾರೆ. ಹಾಗಾಗಿ ಪೇಜಾವರ ಶ್ರೀಗಳ ಮಧ್ಯಪ್ರವೇಶ ಸಾಧುವಲ್ಲ ಎಂದು ಎಂ ಬಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲಿಂಗಾಯಿತ ಧರ್ಮ ಜಾಗತಿಕ ಧರ್ಮ ಆಗಬೇಕು. ಇದರಲ್ಲಿ ಸಿದ್ದರಾಮಯ್ಯನವರನ್ನು ಎಳೆದು ತರಬಾರದು. ಲಿಂಗಾಯಿತ ಪ್ರತ್ಯೇಕ ಧರ್ಮಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ. 

ಪೇಜಾವರ ಶ್ರೀಗಳು ಒಂದು ಸಿದ್ದಾಂತದ ಕಪಿಮುಷ್ಟಿಯಲ್ಲಿದ್ದವರು. ಆರ್’ಎಸ್ಎಸ್'ನಲ್ಲಿ ಇದ್ದವರು. ಸ್ವಾಭಾವಿಕವಾಗಿ ಹಿಂದೂ ಧರ್ಮದಲ್ಲೇ ಮುಂದುವರೆಯಬೇಕು ಎಂದು ಅವರು ಬಯಸುತ್ತಾರೆ. ಆದರೆ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ತರವಲ್ಲ ಎಂದು ಪಾಟೀಲ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?