
ಬೆಂಗಳೂರು (ಮಾ. 12): ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಧಿಕಾರಿಗಳ ಮೇಲಿನ ಹಲ್ಲೆ, ಪದೇಪದೇ ವರ್ಗಾವಣೆ ಸೇರಿದಂತೆ ಹಲವು ಘಟನೆಗಳ ಬಗ್ಗೆ ಐಪಿಎಸ್ ಅಧಿಕಾರಿಗಳ ಸಂಘ ತೀವ್ರ ಅಸಮಾಧಾನ ಹೊರಹಾಕಿದೆ.
ಈ ಸಂಬಂಧ ಸಂಘದ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ.ರಾಜ್‌ವೀರ್ ಪ್ರತಾಪ್ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಇಂದು ಬೆಳಿಗ್ಗೆ ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ. ನಿನ್ನೆ ತಡರಾತ್ರಿಯೂ ಸಿಎಂ ಸಭೆ ನಡೆಸಿದ್ದರು.
ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಡಿಜಿಐಜಿಪಿ ನೀಲಮಣಿರಾಜು, ಸರ್ಕಾರದ ಮುಖ್ಯಕಾರ್ಯದರ್ಶ ರತ್ನಪ್ರಭ, ಗೃಹ ಇಲಾಖೆ ಕಾರ್ಯದರ್ಶಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಐಪಿಎಸ್ ಅಧಿಕಾರಿಗಳ ನಡೆಗೆ ಮುಖ್ಯಮಂತ್ರಿ ಗರಂ ಆಗಿದ್ದಾರೆ. ಸರ್ಕಾರದ ವಿರುದ್ಧ ಐಪಿಎಸ್ ಬಂಡಾಯ ಸರಿಯಾ..? ನಿಮ್ಮ ಸಮಸ್ಯೆಗಳು ಸರ್ಕಾರದ ಗಮನಕ್ಕೆ ತರುವ ರೀತಿ ಇದಾ..? ಪತ್ರಬರೆದವರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಗೃಹಸಚಿವರು ಮತ್ತು ಡಿಜಿಐಜಿಪಿಗೆ ಸೂಚನೆ ನೀಡಿದ್ದಾರೆ. ಮತ್ತೊಮ್ಮೆ ಇಂಥ ಪ್ರಕರಣ ಮರುಕಳಿಸಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.