ಹರಿಯಾಣದಲ್ಲಿ ಬಿಜೆಪಿ ಹೇಗೆ ಅಧಿಕಾರಕ್ಕೆ ಬಂತು ಅನ್ನೋ ಅನುಮಾನಕ್ಕೆ ರಾಹುಲ್‌ ಗಾಂಧಿ ಉತ್ತರ ನೀಡಿದ್ದಾರೆ: ಸಿದ್ದರಾಮಯ್ಯ

Published : Nov 05, 2025, 02:51 PM IST
siddaramaiah VOte Theft

ಸಾರಾಂಶ

CM Siddaramaiah Backs Rahul Gandhi Vote Theft is the Answer to BJP Haryana Victory Surprise ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪವನ್ನು ಸಿದ್ದರಾಮಯ್ಯ ಬೆಂಬಲಿಸಿದ್ದಾರೆ. 

ಬೆಂಗಳೂರು (ನ.5): ಬಹುತೇಕ ಎಲ್ಲಾ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳೀಪಟವಾಗಲಿದೆ ಎಂದಿದ್ದರೂ ಬಿಜೆಪಿ ಹೇಗೆ ಬಹುಮತ ಪಡೆದು ಹರಿಯಾಣದಲ್ಲಿ ಅಧಿಕಾರ ಹಿಡಿಯಿತು ಅನ್ನೋ ಅನುಮಾನಕ್ಕೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವೋಟ್‌ಚೋರಿ ಆಪಾದನೆಯನ್ನು ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಮಾಡಿರುವ ರಾಹುಲ್‌ ಗಾಂಧಿ, ಹರಿಯಾಣದಲ್ಲಿ ಬಿಜೆಪಿ ಚುನಾವಣಾ ಮೋಸದಿಂದ ಅಧಿಕಾರ ಹಿಡಿದುಕೊಂಡಿದೆ ಎಂದು ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿಯ ಪತ್ರಿಕಾಗೋಷ್ಠಿಯ ಫೋಟೋಗಳನ್ನು ಪೋಸ್ಟ್‌ ಮಾಡಿ ಟ್ವೀಟ್‌ ಮಾಡಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ,' ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಬರೆದಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ.

5 ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ‌ ಒಂದು ನಕಲಿ‌ ಮತ ಎನ್ನುವುದು ಸ್ಪಷ್ಟ.

ಚುನಾವಣಾ ಆಯೋಗ ಪ್ರಾಯಶ್ಚಿತ ಮಾಡಿಕೊಳ್ಳಲಿ

ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರು ಉತ್ತರ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ "ತನ್ನ ಮಾಲೀಕರ" ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Explainer: ವಿಶ್ವದ ಅತಿದೊಡ್ಡ ಏರ್‌ಲೈನ್ಸ್‌ ಸ್ಮಶಾನವಾದ ಭಾರತ, ದೇಶದಲ್ಲಿ ವಿಮಾನ ಕಂಪನಿ ಬದುಕೋದು ಯಾಕೆ ಕಷ್ಟ?
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ