
ಮೈಸೂರು (ಮಾ. 29): ಚಾಮುಂಡೇಶ್ವರಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಮತಯಾಚನೆ ಆರಂಭಿಸಿದ್ದಾರೆ. ಇಂದಿನಿಂದ ಮತ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಇಂದಿನಿಂದ ಐದು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 2 ರಂದು ರಾಜಧಾನಿಗೆ ವಾಪಸ್ಸಾಗಲಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮೂಡ್ ಬದಲಿಸಲು ತಂತ್ರ ಹೆಣೆದಿದ್ದಾರೆ. ಮೊದಲಿಗೆ ರಮ್ಮನಹಳ್ಳಿಯಿಂದ ಪ್ರಚಾರ ಆರಂಭ ಮಾಡಲಿದ್ದಾರೆ. ಕಾಳಸಿದ್ದನ ಹುಂಡಿ, ಹಂಚ್ಯ, ಗಳಗರ ಹುಂಡಿ, ಮೆಲ್ಲಹಳ್ಳಿ, ಉದಬೂರು ಗ್ರಾಮಗಳಿಗೆ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಸಾಧನಾ ಸಮಾವೇಶ, ಜನಾರ್ಶೀವಾದ ಯಾತ್ರೆ ಹೆಸರಿನಲ್ಲಿ ಎರಡು ಸುತ್ತಿನ ಪ್ರವಾಸ ಮುಗಿಸಿರುವ ಸಿದ್ದರಾಮಯ್ಯ ಇಂದಿನಿಂದ ತವರು ಜಿಲ್ಲೆ ಮೈಸೂರಿನಲ್ಲಿ ಪ್ರಚಾರ ಆರಂಭಿಸಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ನಂತರ ತಾವು ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರದಿಂದ ಮತಯಾಚನೆ ಆರಂಭಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.