ಬೆಂಗಳೂರಲ್ಲಿ ಬಡವರಿಗೆ ಸಿಗುತ್ತಿದೆ 1 ಲಕ್ಷ ಫ್ಲಾಟ್

Published : Dec 06, 2017, 07:34 AM ISTUpdated : Apr 11, 2018, 12:53 PM IST
ಬೆಂಗಳೂರಲ್ಲಿ  ಬಡವರಿಗೆ ಸಿಗುತ್ತಿದೆ 1 ಲಕ್ಷ ಫ್ಲಾಟ್

ಸಾರಾಂಶ

ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ವಸತಿ ರಹಿತರಿಗೆ ಬೆಂಗಳೂರು ನಗರದಲ್ಲಿ ಸ್ವಂತ ಸೂರು ಒದಗಿಸುವ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಬೆಂಗಳೂರು(ಡಿ.6): ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ವಸತಿ ರಹಿತರಿಗೆ ಬೆಂಗಳೂರು ನಗರದಲ್ಲಿ ಸ್ವಂತ ಸೂರು ಒದಗಿಸುವ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ವಸತಿ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೂತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲೆಯ 1,200 ಎಕರೆ ಜಮೀನಿನಲ್ಲಿ ಕೆಳ ಅಂತಸ್ತು ಹೊರತುಪಡಿಸಿ ಮೂರು ಮಹಡಿಯ ವಸತಿ ಗೃಹಗಳನ್ನು ನಿರ್ಮಿಸಿ, ಅರ್ಹ ಕುಟುಂಬಗಳಿಗೆ ವಿತರಿಸಲಾಗುವುದು ಎಂದರು.

ಬಿಬಿಎಂಪಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕನಿಷ್ಠ 5 ವರ್ಷಗಳ ಕಾಲ ಸೂರಿಲ್ಲದೆ ವಾಸಿಸುತ್ತಿರುವ ಅರ್ಹ ಫಲಾನುಭವಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 87 000 ರು.ಗಳ ಒಳಗಿರಬೇಕು. ಯೋಜನೆಯಡಿ ಪ್ರತಿ ಮನೆಗೆ 5.50 ಲಕ್ಷ ರು.ದಿಂದ 6 ಲಕ್ಷ ರು. ಹಣ ಖರ್ಚು ಮಾಡಲಾಗುತ್ತಿದೆ.

ಮನೆಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಶೇ.30ರಷ್ಟು, ಪರಿಶಿಷ್ಟ ವರ್ಗಕ್ಕೆ ಸೇರಿದವರಿಗೆ ಶೇ.10ರಷ್ಟು , ಅಲ್ಪಸಂಖ್ಯಾತರಿಗೆ ಶೇ.10ರಷ್ಟು ಹಾಗೂ ಸಾಮಾನ್ಯ ವರ್ಗ ದವರಿಗೆ ಶೇ.50ರಷ್ಟು ಮೀಸಲಿನಡ  ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 3.50 ಲಕ್ಷ ರು. ಹಾಗೂ ಸಾಮಾನ್ಯ ವರ್ಗದ ವರಿಗೆ 2.70 ಲಕ್ಷ ರು.ಸಹಾಯಧನ ನೀಡಲಿದ್ದು, ಮನೆ ಹಂಚಿಕೆ ವೇಳೆಯಲ್ಲಿ ಫಲಾನುಭವಿಗಳು ಹಣವನ್ನು ತುಂಬಬಹುದಾಗಿದೆ.

ಅಲ್ಲದೇ ಬ್ಯಾಂಕ್ ಗಳಿಂದ ಸಾಲದ ನೆರವು ಪಡೆಯಲು ಸಹಾಯ ಮಾಡಲಾಗುವುದು ಎಂದು ಹೇಳಿದರು. 2018ರ ಜನವರಿ 5ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು 250 ರು.ಗಳಿಂದ 1000 ರು.ಗಳಿಗೆ ಇಳಿಸಲಾಗಿದೆ. ಶೇ.75ರಷ್ಟು ಮನೆಗಳನ್ನು ಲಾಟರಿ ಮೂಲಕ ಹಾಗೂ ಶೇ.25ರಷ್ಟು ಮನೆಗಳನ್ನು ಕಡುಬಡವರಿಗೆ ಆದ್ಯತೆಯ ಮೇಲೆ ಹಂಚಿಕೆ ಮಾಡಲಾಗುವುದು. ಈ ಯೋಜನೆಯಡಿ ವಸತಿ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು ಎಂದರು.

ದೇಶದಲ್ಲೇ ಈ ವಸತಿ ಯೋಜನೆ ವಿಶಿಷ್ಟವಾಗಿದ್ದು, ಪ್ರತಿ ವರ್ಷ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡುವ ಉದ್ದೇಶ ಸರ್ಕಾರದ್ದಾಗಿದೆ. ಈ ಯೋಜನೆ ನಿರಂತರವಾಗಿ ನಡೆಯಲಿದೆ. ಇದರ ಉಪಯೋಗ ವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು. ವಸತಿ ಸಚಿವ ಎಂ. ಕೃಷ್ಣಪ್ಪ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದ ರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ದೇಶದಲ್ಲಿ ದೇವರಿಗೇ ಜಾಗವಿಲ್ಲ; ಬೈಬಲ್, ಕುರಾನ್ ಸಿಕ್ಕರೆ ನೇರ ಜೈಲು, ಮರಣದಂಡನೆ!
ಟ್ರಾಫಿಕ್ ದಂಡ ಇನ್ನೂ ಕಟ್ವಿಲ್ವಾ? ಹೀಗೆ ಭಾರತದಲ್ಲಿ ಬಾಕಿ ಉಳಿದಿರುವ ಮೊತ್ತ 39000 ಕೋಟಿ ರೂ