ಏಷ್ಯಾ ಖಂಡದ ಅತೀ ದೊಡ್ಡ ಸೋಲಾರ್ ಪಾರ್ಕ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

By Suvarna Web Desk  |  First Published Mar 1, 2018, 4:38 PM IST

ಏಷ್ಯಾ ಖಂಡದಲ್ಲೇ ಅತಿ ದೊಡ್ಡದು ಎನ್ನುವ ಖ್ಯಾತಿ ಹೊಂದಿರುವ ಪಾವಗಡದ ಸೋಲಾರ್ ಪಾರ್ಕ್'ನ ಮೊದಲ ಹಂತದ ಯೋಜನೆಯನ್ನ  ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ. 


ಬೆಂಗಳೂರು (ಮಾ. 01):  ಏಷ್ಯಾ ಖಂಡದಲ್ಲೇ ಅತಿ ದೊಡ್ಡದು ಎನ್ನುವ ಖ್ಯಾತಿ ಹೊಂದಿರುವ ಪಾವಗಡದ ಸೋಲಾರ್ ಪಾರ್ಕ್'ನ ಮೊದಲ ಹಂತದ ಯೋಜನೆಯನ್ನ  ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ. 
ಪಾವಗಡ ತಾಲ್ಲೂಕಿನಲ್ಲಿ ಸುಮಾರು 13 ಸಾವಿರ ಎಕರೆಯಲ್ಲಿ ನಿರ್ಮಾಣವಾಗುತ್ತಿರುವ 10 ಸಾವಿರ ಕೋಟಿ ವೆಚ್ಚದ ಸೋಲಾರ್ ಪಾರ್ಕ್ ಮೊದಲ ಹಂತದ ಕಾಮಗಾರಿಯನ್ನ ಪೂರ್ಣಗೊಳಿಸಿದೆ. ಒಟ್ಟು 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿರುವ ಸೋಲಾರ್ ಪಾರ್ಕ್ ಮೊದಲ ಹಂತದಲ್ಲಿ 600 ಮೆಗಾ ವ್ಯಾಟ್ ವಿದ್ಯುತ್ತ್  ಪೂರೈಸಲು ಅಣಿಯಾಗಿದೆ. 

ಪ್ರಸ್ತುತ 13 ಸಾವಿರ ಎಕರೆ ಪ್ರದೇಶದಲ್ಲಿ 12 ಸಾವಿರ ಎಕರೆ ಪ್ರದೇಶವನ್ನು ರೈತರಿಂದ ಪಡೆದು ಕಂಪನಿಗೆ ಹಸ್ತಾಂತರಿಸಲಾಗಿದೆ. ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ.ಶಿವಕುಮಾರ್,  ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕರು ಇಂದಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 
 

Tap to resize

Latest Videos

click me!