
ಮೈಸೂರು(ಜ.20): ಮೈಸೂರು ವಿಶ್ವವಿದ್ಯಾಲಯದ 98ನೇ ವರ್ಷದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ನೀಡಲು ಹಲವರ ಹೆಸರುಪ್ರಸ್ತಾಪಿಸಲಾಗಿದ್ದು, ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಸಾಲು ಮರದ ತಿಮ್ಮಕ್ಕ ಅವರ ಹೆಸರೂಸೇರಿವೆ.
ಮೈಸೂರು ವಿವಿ ಗೌರವ ಡಾಕ್ಟರೆಟ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮೈಸೂರು ತಾಪಂ ಸದಸ್ಯ, ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ್ ಅವರು ಗುರುವಾರ ನಡೆದ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಕಳೆದ ಬಾರಿಯೇ ಬೆಂಗಳೂರು ವಿಶ್ವವಿದ್ಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆದರೆ, ಆ ಮನವಿಯನ್ನು ಸಿದ್ದರಾಮಯ್ಯ ತಿರಸ್ಕರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.