
ಬೆಂಗಳೂರು (ಫೆ. 17): ಸಿಎಂ ಸಿದ್ದರಾಮಯ್ಯಗೆ ಅವರ ತವರಿನಲ್ಲಿಯೇ ಆಹ್ವಾನ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸರ್ಕಾರಿ ಕಾರ್ಯಕ್ರಮಕ್ಕೆ ಸಿಎಂನ್ನು ಇನ್ನೂ ಆಹ್ವಾನಿಸಿಲ್ಲ.
ಫೆ.19 ರಂದು ಮೈಸೂರಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ನಾಳೆ ರಾತ್ರಿ ಮೈಸೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನಲೆಯಲ್ಲಿ ಪ್ರೋಟೋಕಾಲ್ ಪ್ರಕಾರ ಅವರನ್ನು ಬರ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಆದರೆ ಬಿಜೆಪಿಯಿಂದ ಸಿಎಂಗೆ ಆಹ್ವಾನ ಬಂದಿಲ್ಲ. ರಾತ್ರಿ11ಕ್ಕೆ ಮಂಡಕಳ್ಳಿ ಏರ್ಪೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮೋದಿಗೆ ಸ್ವಾಗತ ಕೋರಲಿದ್ದಾರೆ.
ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾರ್ಯಕ್ರಮಗಳು, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.