
ಬೆಂಗಳೂರು: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾಡಿರುವ ಭಾಷಣಕ್ಕೆ ‘ಸಂತೋಷ’ ವ್ಯಕ್ತಪಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಮೋದಿಯವರೇ, ನೀವಿಂದು ಸಂಸತ್ತಿನಲ್ಲಿ ನನ್ನನ್ನು ಸ್ಮರಿಸಿದ್ದೀರಿ. ಅದೇ ರೀತಿ ಬಸವಣ್ಣರನ್ನು ಸ್ಮರಿಸಿರುವುದು ಸಂತೋಷ ತಂದಿದೆ. ‘ಉಳ್ಳವರು ಶಿವಾಲಯ ಮಾಡಿಹರು, ನಾನೇನ ಮಾಡುವೆ ಬಡವನಯ್ಯಾ’ ಎಂದು ಬಸವಣ್ಣ ಹೇಳಿದ್ದಾರೆ. ನೀವು ಬಸವಣ್ಣನ ತತ್ವಗಳನನ್ನು ಪಾಲಿಸಿದರೆ ಕನ್ನಡಿಗರು ಧನ್ಯವಾದ ಹೇಳುತ್ತಾರೆ, ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.
ಇಂದು ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಕೂಡಾ ಪ್ರಸ್ತಾಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.