
ಬೆಂಗಳೂರು(ಡಿ.6): ಸಾಮಾಜಿಕ ನ್ಯಾಯ ದೃಷ್ಟಿಯಿಂದ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ‘ಭಾಗ್ಯ’ ಸರಣಿಯ ಯೋಜನೆಗಳಿಂದಾಗಿ ಬೊಕ್ಕಸದ ಮೇಲೆ ಹೊರೆ ಬೀಳುತ್ತಿರಬಹುದು. ಟೀಕೆಗಳು ವ್ಯಕ್ತವಾಗುತ್ತಿರಬಹುದು. ಆದರೆ ಈ ಕಾರ್ಯಕ್ರಮಗಳಿಂದ ಕಾಂಗ್ರೆಸ್ ಸರ್ಕಾರದ ‘ಮತ ಬ್ಯಾಂಕ್’ಗೆ ಒಳ್ಳೆಯದೇ ಆಗುತ್ತಿದೆ ಎಂಬ ಭಾವನೆ ಜನ ಸಾಮಾನ್ಯರಲ್ಲಿದೆ.
ಈ ಯೋಜನೆಗಳು ರಾಜಕೀಯ ತಂತ್ರ ಗಳಾಗಿದ್ದರೂ, ಕಾಂಗ್ರೆಸ್ಸಿನ ಮತ ಬ್ಯಾಂಕಿಗೆ ಸಹಾಯಕ ವಾಗಿವೆ ಎಂದು ರಾಜ್ಯದ ಶೇ.34 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.17 ಮಂದಿ ನಿಶ್ಚಿತವಾಗಿಯೂ ಇದರಿಂದ ಸಹಾಯವಾಗಿದೆ ಎಂದು ಹೇಳಿದ್ದಾರೆ. ಇವೆರಡೂ ಅಭಿಪ್ರಾಯವನ್ನು ಕೂಡಿಸಿ ನೋಡುವುದಾದರೆ, ಸಿದ್ದು ಸರ್ಕಾರ ಖುಷಿ ಪಡಬಹುದು. ವಿಶೇಷ ಎಂದರೆ, ಲಿಂಗಾಯುತ ಪ್ರಾಬಲ್ಯವಿರುವ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಮುಂಬೈ ಕರ್ನಾಟಕ ಭಾಗದಲ್ಲಿ ಶೇ.51ರಷ್ಟು ಮಂದಿ ಇದೇ ಅಭಿಪ್ರಾಯ ವ್ಯಕ್ತಪಡಿಸಿರುವುದು ಪ್ರತಿಪಕ್ಷದ ಪಾಲಿಗೆ ಎಚ್ಚರಿಕೆಯ ಗಂಟೆ.
ಕರಾವಳಿಯಲ್ಲಿ ತದ್ವಿರುದ್ಧ ಅಭಿಪ್ರಾಯವಿರುವು ದರಿಂದ ಬಿಜೆಪಿ ನಿಟ್ಟುಸಿರು ಬಿಡಬಹುದು. ಜನಪ್ರಿಯ ಯೋಜನೆಗಳಿಂದ ಜನರ ವಿಶ್ವಾಸ ಗಳಿಸಬಹುದು ಎಂಬ ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಫಲ ನೀಡುತ್ತಿರುವ ಸೂಚನೆ ಇದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.