
ಬೆಂಗಳೂರು: ರೈತರ ವಿಚಾರದಲ್ಲಿ ಮೊಸಳೆ ಕಣ್ಣೀರು ಸುರಿಸುವ, ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರೈತ ಬಂಧು ಹೇಗಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಯಡಿಯೂರಪ್ಪ ಅವರ 75ನೇ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ರೈತ ಸಮಾವೇಶ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ರೈತರ ವಿಚಾರದಲ್ಲಿ ಯಡಿಯೂರಪ್ಪ ಮೊಸಳೆ ಕಣ್ಣೀರು ಸುರಿಸುತ್ತಾರೆ. ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದರಿಂದ ಇಬ್ಬರು ರೈತರು ಮೃತಪಟ್ಟರು. ಸಾಲ ಮನ್ನಾ ಮಾಡಿ ಎಂದಾಗ ನನ್ನ ಬಳಿ ನೋಟು ಮುದ್ರಿಸುವ ಯಂತ್ರ ಇಲ್ಲ ಎಂದಿದ್ದರು. ಆದರೆ, ಈಗ ಅವರು ರೈತ ಬಂಧು ಹೇಗಾಗುತ್ತಾರೆ ಎಂದು ವ್ಯಂಗ್ಯವಾಡಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ ಎಂದ ಅವರು ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮುಷ್ಟಿ ಅಕ್ಕಿಯೇ ಗತಿ. ಪಡಿತರದಲ್ಲಿ ನಾವು ಪ್ರತಿಯೊಬ್ಬರಿಗೂ ಏಳು ಕಿಲೋ ಅಕ್ಕಿ ಕೊಡುತ್ತಿದ್ದೇವೆ ಎಂದೂ ಅವರು ಕುಟುಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.