
ಚಿತ್ರದುರ್ಗ : ನನ್ನ ಪುತ್ರ ಚುನಾವಣೆಯಲ್ಲಿ ಟಿಕೆಟ್ ಕೇಳಿಲ್ಲ. ಆದರೆ ಜನರ ಅಪೇಕ್ಷೆ ಮೇರೆಗೆ ಚುನಾವಣಾ ಕಣಕ್ಕೆ ಇಳಿಯಲು ತೀರ್ಮಾನ ಮಾಡಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗದ ಹೊಸ ದುರ್ಗದಲ್ಲಿ ಹೇಳಿಕೆ ನೀಡಿದ್ದಾರೆ.
ವೀಕ್ಷಕರ ಸರ್ವೆ ಮೇರೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲವು ಮಠಾಧೀಶರು ಹಾಗೂ ಶಾಸಕರ ಮಕ್ಕಳೂ ಕೂಡ ಟಿಕೆಟ್’ಗೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಇನ್ನು ಇದೇ ವೇಳೆ ಲಿಂಗಾಯತ ಪ್ರತ್ಯೆಕ ಧರ್ಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಪ್ರತ್ಯೇಕ ಧರ್ಮ ರಚನೆ ಮಾಡುವ ಅಗತ್ಯವಿಲ್ಲ ಎಂದು ಮಠಾಧೀಶರು ಹೇಳಿದ್ದಾರೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಇದೇ ವೇಳೆ ಈಶ್ವರಪ್ಪಗೆ ಬಿಜೆಪಿಯಲ್ಲಿ ಇನ್ನೂ ಟಿಕೆಟ್ ಪಕ್ಕಾ ಆಗಿಲ್ಲ. ಯಡಿಯೂರಪ್ಪ ಓರ್ವ ದೊಡ್ಡ ಸುಳ್ಳುಗಾರ ಎಂದು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋತು ಸುಣ್ಣವಾಗಿದೆ. ಅಲ್ಲಿ ಸಲ್ಲದವರೂ ಇಲ್ಲಿಯೂ ಸಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.