
ಮೈಸೂರು: ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸ್ತೀನಿ ಎಂದು ನಿನ್ನೆ ಹೇಳಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಈ ಹೇಳಿಕೆ ಬಗ್ಗೆ ಯು ಟರ್ನ್ ತೆಗೆದುಕೊಂಡಿದ್ದಾರೆ.
ಮೈಸೂರಿನಲ್ಲಿ ಮಾತಾಡಿದ ಸಿಎಂ, ಹೈಕಮಾಂಡ್ ಹೇಳಿದ ಕಡೆ ನಾನು ಸ್ಪರ್ಧೆ ಮಾಡ್ತೀನಿ ಎಂದು ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಅಲ್ಲಿಯೇ ನಿಲ್ಲುವಂತೆ ಜನರ ಒತ್ತಾಯ ಹೆಚ್ಚಿದೆ ಎಂದು ಹೇಳುವ ಮೂಲಕ ನಿನ್ನೆಯ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.
2008ರಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆಯಾದಾಗ ಹೊಸದಾಗಿ ವರುಣಾ ಕ್ಷೇತ್ರ ಹುಟ್ಟಿಕೊಂಡಿತ್ತು. ಚಾಮುಂಡೇಶ್ವರಿ ಕ್ಷೇತ್ರದ ಕೆಲ ಭಾಗಗಳು ವರುಣಾ ಕ್ಷೇತ್ರಕ್ಕೂ ಸೇರಿಕೊಂಡಿತ್ತು. ವಿಶೇಷವಾಗಿ ವರುಣಾ ನಾಲೆಯ ನಿರ್ಮಾಣ ಪೂರ್ಣಗೊಳಿಸಿ, ನೀರು ಹರಿಸುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಹೀಗಾಗಿ ವರುಣಾ ಹೋಬಳಿಯಲ್ಲಿ ಸಿದ್ದರಾಮಯ್ಯ ಅವ್ರಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿತ್ತು. ಇದನ್ನು ಅರಿತ ಸಿದ್ದರಾಮಯ್ಯ ಐದು ಬಾರಿ ಪ್ರತಿನಿಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಗುಡ್ ಬೈ ಹೇಳಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.