
ಬೆಂಗಳೂರು(ಡಿ.21): ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಗೆ ಸರ್ಕಾರ ಎಳ್ಳುನೀರು ಬಿಟ್ಟಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಕಾಯ್ದೆ ಜಾರಿಗೆ ತರಲಾಗುತ್ತಿಲ್ಲ ಅಂತ ಘೋಷಿಸಿದ್ದಾರೆ.
ಟ್ವಿಟರ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು,ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಾರಣದಿಂದಾಗಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿಲ್ಲ ಅಂತ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ತೀವ್ರ ವಿರೋಧದ ನಡುವೆಯೂ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದೇ ತರುವೆ ಎಂದು ಪಣತೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ಇದೀಗ, ಕಾಯ್ದೆ ಜಾರಿಯಿಂದ ಹಿಂದೆ ಸರಿದಿರುವುದು ಪ್ರಗತಿಪರರ ಕೆಂಗಣ್ಣಿಗೆ ಗುರಿಯಾಗಿದೆ.
ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಗೆ ಜಾರಿ ಅಸಾಧ್ಯ ಎನ್ನುವ ಮಾತನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ಪರೋಕ್ಷವಾಗಿ ಹೇಳಿದ್ದರು. ಬೆಂಗಳೂರಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ,' ವಿಜ್ಞಾನ ಇಷ್ಟೆಲ್ಲ ಮುಂದುವರೆದಿದ್ದರೂ ಇನ್ನೂ ಅಂಧಶ್ರದ್ಧೆ ಉಳಿದುಕೊಂಡಿದೆ. ಇದನ್ನು ಹೋಗಲಾಡಿಸಲು ಮುಂದಾದರೆ ಪಟ್ಟಭದ್ರ ಹಿತಾಸಕ್ತಿಗಳಿಂದ ದೊಡ್ಡ ವಿರೋಧ ಬರುತ್ತದೆ' ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಆದರೆ ಇಂದು, ಕಾಯ್ದೆ ಜಾರಿ ಸಾಧ್ಯವಾಗುತ್ತಿಲ್ಲ ಅನ್ನೋದನ್ನ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.