ಟಿಕೆಟ್ ಆಯ್ಕೆ ಚರ್ಚೆಗೆ ದಿಲ್ಲಿಗೆ ಸಿಎಂ ಸಿದ್ದರಾಮಯ್ಯ

Published : Apr 12, 2018, 10:24 AM ISTUpdated : Apr 14, 2018, 01:13 PM IST
ಟಿಕೆಟ್ ಆಯ್ಕೆ ಚರ್ಚೆಗೆ ದಿಲ್ಲಿಗೆ ಸಿಎಂ ಸಿದ್ದರಾಮಯ್ಯ

ಸಾರಾಂಶ

ಟಿಕೆಟ್ ಆಯ್ಕೆ ಸಂಬಂಧ ವರಿಷ್ಠರೊಂದಿಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಸಚಿವರು ಹಾಗೂ ಹಿರಿಯ ನಾಯಕರ ಪುತ್ರರಿಗೆ ಟಿಕೆಟ್ ನೀಡುವ ಕುರಿತು ಚರ್ಚಿಸಲಿದ್ದಾರೆ.

ಬೆಂಗಳೂರು : ಟಿಕೆಟ್ ಆಯ್ಕೆ ಸಂಬಂಧ ವರಿಷ್ಠರೊಂದಿಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಸಚಿವರು ಹಾಗೂ ಹಿರಿಯ ನಾಯಕರ ಪುತ್ರರಿಗೆ ಟಿಕೆಟ್ ನೀಡುವ ಕುರಿತು ಚರ್ಚಿಸಲಿದ್ದಾರೆ.

ಸಿಎಂ ಪುತ್ರ ಯತೀಂದ್ರ, ಸೇರಿದಂತೆ ಇತರೆ ಮೂವರು ನಾಯಕರ ಮಕ್ಕಳಿಗೆ ಟಿಕೆಟ್ ನೀಡಲು ಈಗಾಗಲೇ ಸ್ಕ್ರೀನಿಂಗ್ ಕಮಿಟಿ ಒಪ್ಪಿದ್ದು, ವರುಣಾದಿಂದ ಸಿಎಂ ಪುತ್ರ ಯತೀಂದ್ರ. ಕೆ.ಜಿ.ಎಫ್ ಕ್ಷೇತ್ರದಿಂದ ಕೆ.ಎಚ್ ಮುನಿಯಪ್ಪ ಪುತ್ರಿ ರೂಪಾ, ಜಯನಗರದಿಂದ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೇರಿ ಈ  ಮೂವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ.  ನಾಳೆಯ ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ  ಈ ಟಿಕೆಟ್’ಗಳಿಗೆ ಅಂಕಿತ ನೀಡುವ  ಸಾಧ್ಯತೆ ಇದೆ.

ಉಳಿದ ನಾಯಕರ ಪುತ್ರರ ಟಿಕೆಟ್ ಬಗ್ಗೆಯೂ ಕೂಡ ಕೆಲವು ಹಿರಿಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಇತರೆ ನಾಯಕರ ಮಕ್ಕಳ ಪಟ್ಟಿಯಲ್ಲಿ ಚಿಕ್ಕನಾಯಕನಹಳ್ಳಿ - ಜಯಚಂದ್ರ ಪುತ್ರ ಸಂತೋಷ್ ಜಯಚಂದ್ರ, ತಿ ನರಸೀಪುರದಿಂದ ಎಚ್.ಸಿ ಮಹದೇವಪ್ಪ ಪುತ್ರ ಸುಭಾಷ್ ಬೋಸ್, ತುಮಕೂರು ಗ್ರಾಮಾಂತರದಿಂದ ಕೆ.ಎನ್ ರಾಜಣ್ಣ ಪುತ್ರ ರಾಜೇಂದ್ರ, ಶಿರಸಿಯಿಂದ ಮಾರ್ಗರೇಟ್ ಆಳ್ವಾ ಪುತ್ರ ನಿವೇದಿತ್ ಆಳ್ವಾ, ಹಾನಗಲ್’ನಿಂದ ಮನೋಹರ ತಹಶೀಲ್ದಾರ ಪುತ್ರ ರಾಘವೇಂದ್ರ ತಹಶೀಲ್ದಾರ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹೆಸರಿಗೆ ಅಮೆರಿಕಾದಲ್ಲಿ 'ಕೀರ್ತಿ' ತಂದ ಅನೂಯಾ ಸ್ವಾಮಿ.. ಯಾರು ಈ 'ಪಂಕಜ'..?!
ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!