2018ರಲ್ಲಿ ಸಿದ್ಧರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ? ಸಿಎಂ ಹೇಳಿದ್ದೇನು?

Published : May 19, 2017, 10:48 AM ISTUpdated : Apr 11, 2018, 12:42 PM IST
2018ರಲ್ಲಿ ಸಿದ್ಧರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ? ಸಿಎಂ ಹೇಳಿದ್ದೇನು?

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರ ತೊರೆದು ಹೈದರಾಬಾದ್‌ ಕರ್ನಾಟಕದ ಕೊಪ್ಪಳದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗೆ ಈಗ ಇನ್ನಷ್ಟುರೆಕ್ಕೆಪುಕ್ಕ ಬರುತ್ತಿದೆ. ಸ್ವತಃ ಸಿದ್ದರಾಮಯ್ಯ ಅವರೇ ಈಗ ಕೊಪ್ಪಳದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಮೇ.19): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರ ತೊರೆದು ಹೈದರಾಬಾದ್‌ ಕರ್ನಾಟಕದ ಕೊಪ್ಪಳದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗೆ ಈಗ ಇನ್ನಷ್ಟುರೆಕ್ಕೆಪುಕ್ಕ ಬರುತ್ತಿದೆ. ಸ್ವತಃ ಸಿದ್ದರಾಮಯ್ಯ ಅವರೇ ಈಗ ಕೊಪ್ಪಳದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿಜಯಪುರಕ್ಕೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಪ್ಪಳದಲ್ಲೊಮ್ಮೆ ಸ್ಪರ್ಧೆ ಮಾಡಬೇಕು ಎನ್ನುವ ಬಯಕೆ ಇದೆ ಎಂದು ಹೇಳಿದರು. ಆದರೆ, ಯಾವಾಗ ಎನ್ನುವ ಪ್ರಶ್ನೆಗೆ ಮಾತ್ರ ಉತ್ತರಿಸಲು ಅವರು ನಿರಾಕರಿಸಿದರು. ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಡಾ.ಯತೀಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸುವ ಬಯಕೆ ಸಿಎಂ ಅವರಿಗೆ ಇದೆ.

 

ಹೀಗಾಗಿ ಸಿದ್ದರಾಮಯ್ಯ ಅವರು ತಾವು ಸ್ಪರ್ಧಿಸಲು ಎರಡು ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಅವು ತಮ್ಮ ಹಳೆಯ ಕ್ಷೇತ್ರವಾದ ಚಾಮುಂಡೇಶ್ವರಿ ಹಾಗೂ ಕೊಪ್ಪಳ. ಚಾಮುಂಡೇಶ್ವರಿ ಸಿಎಂ ಅವರ ಹಳೆಯ ಕ್ಷೇತ್ರವಾದರೂ ಜಾತಿ ಲೆಕ್ಕಾಚಾರ ಅಲ್ಲಿ ಸಂಪೂರ್ಣ ಸರಿ ಹೊಂದುವುದಿಲ್ಲ. ಹೀಗಾಗಿ ಸ್ವಜಾತಿಯ ಮತದಾರರು ಹೆಚ್ಚಿರುವ ಕೊಪ್ಪಳ ಕ್ಷೇತ್ರದ ಸುರಕ್ಷಿತ ಎಂದು ಆಪ್ತರು ಸಿಎಂ ಸಿದ್ದರಾಮಯ್ಯ ಅವರ ಮನವೊ ಲಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳ ಮೇಲೆ ಸಿಎಂ ಕಣ್ಣಿದೆ. 

ರಾಯರಡ್ಡಿ ಬೆಂಬಲ: ಮುಖ್ಯಮಂತ್ರಿ ವ್ಯಕ್ತಪಡಿಸಿದ ಈ ಇಂಗಿತಕ್ಕೆ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರಿಂದಲೂ ಬೆಂಬಲ ಸಿಕ್ಕಿದೆ. ಈ ವಿಚಾರವಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೊಪ್ಪಳದಿಂದ ಸ್ಪರ್ಧಿಸುವುದಾದರೆ ಅದಕ್ಕೆ ನಮ್ಮ ಸ್ವಾಗತ ಇದೆ. ಒಂದು ವೇಳೆ ಅವರು ಕೊಪ್ಪಳದಿಂದ ಸ್ಪರ್ಧಿಸಿದರೆ ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ಗಂಗಾವತಿ ಅಥವಾ ಕುಷ್ಟಗಿಯಿಂದ ಕಣಕ್ಕೆ ಇಳಿಸಲಾಗುವುದು ಎಂದರು. ಇದಕ್ಕೆ ರಾಯರಡ್ಡಿ ಅವರ ಜತೆಗೇ ಇದ್ದ ಹಿಟ್ನಾಳ ಕೂಡ ಒಪ್ಪಿಗೆ ಸೂಚಿಸಿದರು. ಕೊಪ್ಪಳ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಹೊಸದೇನಲ್ಲ. ಕುರುಬರು ಬಹುಸಂಖ್ಯಾತರಿರುವ ಈ ಕ್ಷೇತ್ರದಿಂದ 1991ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ