ಹಲವು ಕಡೆ ಸ್ಪರ್ಧೆಗೆ ಆಹ್ವಾನವಿದೆ: ಸಿದ್ದರಾಮಯ್ಯ

By Suvarna Web DeskFirst Published Apr 6, 2018, 8:59 AM IST
Highlights

ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯಲ್ಲಿ ಚಾಮುಂಡೇ​ಶ್ವರಿ ಕ್ಷೇತ್ರ​ವ​ಲ್ಲದೇ ಮತ್ತೊಂದು ಕ್ಷೇತ್ರ​ದಲ್ಲೂ ಸ್ಪರ್ಧಿ​ಸುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸದ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ಮುಖ್ಯ​ಮಂತ್ರಿ ಸಿದ್ದ​ರಾ​ಮಯ್ಯ ಸ್ಪಷ್ಟ​ಪ​ಡಿ​ಸಿ​ದ​ರು.

ಬೆಂಗಳೂರು : ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯಲ್ಲಿ ಚಾಮುಂಡೇ​ಶ್ವರಿ ಕ್ಷೇತ್ರ​ವ​ಲ್ಲದೇ ಮತ್ತೊಂದು ಕ್ಷೇತ್ರ​ದಲ್ಲೂ ಸ್ಪರ್ಧಿ​ಸುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸದ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ಮುಖ್ಯ​ಮಂತ್ರಿ ಸಿದ್ದ​ರಾ​ಮಯ್ಯ ಸ್ಪಷ್ಟ​ಪ​ಡಿ​ಸಿ​ದ​ರು.

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಬಾದಾಮಿ, ಕುಷ್ಟಗಿ, ಭಾಲ್ಕಿ, ಕೊಪ್ಪಳ, ಕೋಲಾರ, ಬೀಳಗಿ ಸೇರಿದಂತೆ ಹಲವು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಮುಖಂಡರುಗಳು, ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿ​ಸಿ​ದ​ರು.

ಬೆಂಗಳೂರಿನ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನಾನು ಎಲ್ಲಿಯೂ ಹೇಳಿಲ್ಲ. ಅಂತಹ ಯಾವುದೇ ಪ್ರಸ್ತಾವನೆಗಳು ತಮಗೆ ಬಂದಿಲ್ಲ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ. ಅವರಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

ಏ.14ರೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣ: ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಿ ಪಟ್ಟಿಸಿದ್ಧಪಡಿಸಿದೆ. ಕೆಲವು ಕ್ಷೇತ್ರಗಳಲ್ಲಿ ಎರಡರಿಂದ ಐದು ಅಭ್ಯರ್ಥಿಗಳ ಹೆಸರಿರುವ ಪಟ್ಟಿತಯಾರಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಮೂರು ಹಂತಗಳಲ್ಲಿ ನಡೆಯಲಿದೆ.

ರಾಜ್ಯ ಚುನಾವಣಾ ಸಮಿತಿ, ಎಐಸಿಸಿ ಸ್ಕ್ರೀನಿಂಗ್‌ ಕಮಿಟಿ ಹಾಗೂ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ಎಲ್ಲ ಪ್ರಕ್ರಿಯೆ ಏ.13, 14ರೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

click me!