ತೀವ್ರ ಚರ್ಚೆಗೆ ಗ್ರಾಸವಾಗಿದೆ ಸಿಎಂ ಧರ್ಮಸ್ಥಳ ಭೇಟಿ; ಮಾಂಸಾಹಾರ ಸೇವಿಸಿ ದೇಗುಲಕ್ಕೆ ಭೇಟಿ ಕೊಟ್ಟಿದ್ದು ಸರಿಯೇ?

Published : Oct 23, 2017, 09:33 PM ISTUpdated : Apr 11, 2018, 12:36 PM IST
ತೀವ್ರ ಚರ್ಚೆಗೆ ಗ್ರಾಸವಾಗಿದೆ ಸಿಎಂ ಧರ್ಮಸ್ಥಳ ಭೇಟಿ; ಮಾಂಸಾಹಾರ ಸೇವಿಸಿ ದೇಗುಲಕ್ಕೆ ಭೇಟಿ ಕೊಟ್ಟಿದ್ದು ಸರಿಯೇ?

ಸಾರಾಂಶ

ಮಾಂಸಹಾರ ಪ್ರಿಯ ಸಿದ್ದರಾಮಯ್ಯ, ಇದೀಗ ಮೀನು ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದು  ವಿವಾದಕ್ಕೆ ಕಾರಣವಾಗಿದೆ. ನಿನ್ನೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಧರ್ಮಸ್ಥಳದ ಮಂಜುನಾಥನ ಸನ್ನಿದಿಗೆ ಭೇಟಿ ನೀಡಿದ್ದರು. ಇದಕ್ಕೂ ಮುನ್ನ ಮಾಂಸಾಹಾರ ಸೇವನೆ ಮಾಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು (ಅ.23): ಮಾಂಸಹಾರ ಪ್ರಿಯ ಸಿದ್ದರಾಮಯ್ಯ, ಇದೀಗ ಮೀನು ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದು  ವಿವಾದಕ್ಕೆ ಕಾರಣವಾಗಿದೆ. ನಿನ್ನೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಧರ್ಮಸ್ಥಳದ ಮಂಜುನಾಥನ ಸನ್ನಿದಿಗೆ ಭೇಟಿ ನೀಡಿದ್ದರು. ಇದಕ್ಕೂ ಮುನ್ನ ಮಾಂಸಾಹಾರ ಸೇವನೆ ಮಾಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಸಿಎಂ ಸಿದ್ದರಾಮಯ್ಯರ ಮೀನೂಟ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮೀನು ತಿಂದು ನಿನ್ನೆ ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಹಲವರ ವಿರೋಧಕ್ಕೆ ಕಾರಣವಾಗಿದೆ. ನಿನ್ನೆ  ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು.  ತಮ್ಮ ಸರ್ಕಾರದ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ, ದೇವರ ಸನ್ನಿಧಾನಕ್ಕೆ ಭೇಟಿಗೂ ಮುನ್ನ ಸಿಎಂ ಸಿದ್ದರಾಮಯ್ಯ ಮೀನೂಟ ಸೇವಿಸಿದ್ದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. 

ಹಲವರು ಮೀನು ತಿಂದು ದೇವರ ದರ್ಶನ ಪಡೆದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.  ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದು, ದೇವರು ಏನು ಮಾಂಸ ಆಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ಹೇಳಿಲ್ಲ, ಬೇಡರ ಕಣ್ಣಪ್ಪ ಕೂಡ ಶಿವನಿಗೆ ಜಿಂಕೆ ಮಾಂಸ ನೈವೇದ್ಯ ಮಾಡಿದ್ದ, ಮಾಂಸ ಸೇವನೆ ಮಾಡಿ ದೇವಸ್ತಾನಕ್ಕೆ ಹೋಗುವುದು ತಪ್ಪಲ್ಲ ಎಂದಿದ್ದಾರೆ. 

ಸಿಎಂ ಅವರ ಈ ನಡೆಗೆ ಬಿಜೆಪಿ ವಿರೋಧಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಸಿಎಂ ಮಾಂಸಾಹಾರ ಸೇವಿಸೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ತಪ್ಪು ಎಂದಿದ್ದಾರೆ. ಜೆಡಿಎಸ್​ ವರಿಷ್ಠ ದೇವೇಗೌಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಈಗಲಾದರೂ ಸಿಎಂಗೆ ದೇವರ ಮೇಲೆ ನಂಬಿಕೆ ಭಕ್ತಿ ಬಂದಿದೆಯಲ್ಲ, ಅದಕ್ಕೆ ಖುಷಿ ಪಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಟೇಜ್ ಮೇಲೇನೇ ಸಿಟ್ಟಿಗೆದ್ದ ರಚಿತಾ ರಾಮ್ 'ಫ*..' ಅಂದೇಬಿಟ್ರು!.. ಅಂಥಾ ಸಿಟ್ಟು 'ಲೇಡಿ ಬಾಸ್‌'ಗೆ ಯಾಕ್ ಬಂತು?
ಗೋಲ್ಡನ್ ಟೆಂಪಲ್ ಕೊಳದಲ್ಲಿ ಮುಖ ತೊಳೆದು ಉಗುಳಿದ ಅನ್ಯಕೋಮಿನ ವ್ಯಕ್ತಿ, ಭುಗಿಲೆದ್ದ ಆಕ್ರೋಶ