
ಬೆಂಗಳೂರು (ಫೆ.07): ರಾಜ್ಯದ ಮಠಗಳು, ಧಾರ್ಮಿಕ ಸಂಸ್ಥೆಗಳ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. ಮಠಗಳನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿಸಲು ನಡೆದಿದೆ ಬಹುದೊಡ್ಡ ಪ್ಲ್ಯಾನ್ ನಡೆದಿದೆ.
ಚುನಾವಣೆಗೆ ಕೇವಲ 3 ತಿಂಗಳ ಅವಧಿ ಇರುವಾಗಲೇ ಸಿಎಂ ಮಠಗಳ ಮೇಲೆ ಕಣ್ಣಿಟ್ಟಿದ್ದಾರೆ. ಮಠಗಳು, ದೇಗುಲ, ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ವ್ಯಾಪ್ತಿಗೆ ಕಾಯ್ದೆ ತರಲು ಸರ್ಕಾರ ನಿರ್ಧರಿಸಿದೆ.
ಧಾರ್ಮಿಕ ದತ್ತಿ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ಹೊಪರ ಬಿದ್ದಿದೆ. ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಮಠಗಳಿಗೆ ಸೇರಿದ ದೇವಸ್ಥಾನಗಳನ್ನು ಧಾರ್ಮಿಕ ದತ್ತಿ ಕಾಯ್ದೆಗೆ ಒಳಪಡಿಸಬೇಕೆ?
ಒಳಪಡಿಸಬೇಕಿದ್ರೆ ಏಕೆ..? ಎಷ್ಟರಮಟ್ಟಿಗೆ ಒಳಪಡಿಸಬೇಕು ? ಎಂದು ಅಭಿಪ್ರಾಯ ಕೇಳಿ 15 ದಿನದೊಳಗಾಗಿ ಸಾರ್ವಜನಿಕ ಅಭಿಪ್ರಾಯ, ಸಲಹೆ ನೀಡುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.