
ಚಿತ್ರದುರ್ಗ (ನ.07): ನಾವು ಕಳೆದ ಮೂರು ವರ್ಷಗಳಿಂದ ಟಿಪ್ಪು ಜಯಂತಿ ವಿರೋಧಿಸುತ್ತಾ ಬಂದಿದ್ದೇವೆ. ಸೈದ್ದಾಂತಿಕ ವಿಚಾರಗಳ ಮೂಲಕ ಇತಿಹಾಸವನ್ನಿಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಶಾಂತಿಯುತವಾಗಿ ನಾವು ವಿರೋಧಿಸುತ್ತಾ ಬಂದಿದ್ದೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ. ಹಾಗಾದರೆ ಕನ್ನಡ ಮತ್ತು ಸಂಸ್ಕೃತಿಗೆ ಟಿಪ್ಪುವಿನ ಕೊಡುಗೆ ಏನು ಎಂಬುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ರೆವಿನ್ಯೂ ಇಲಾಖೆಯಲ್ಲಿ ಬಳಸುವ ಎಲ್ಲಾ ಶಬ್ದಗಳು ಟಿಪ್ಪು ಸುಲ್ತಾನನ ಪರ್ಶಿಯನ್ ಭಾಷೆಯಲ್ಲಿವೆ. ಹೀಗಾಗಿ ಕನ್ನಡಕ್ಕೆ ಅಪಮಾನ ಮಾಡಿದ ಟಿಪ್ಪುವಿನ ಜಯಂತಿಯನ್ನ ಯಾಕೆ ಆಚರಣೆ ಮಾಡಬೇಕು? ಹೈದರಾಲಿ ಮತ್ತು ಟಿಪ್ಪು ಸುಲ್ತಾನ್ ಚಿತ್ರದುರ್ಗದ ಕೋಟೆಯ ಮೇಲೆ ದಾಳಿ ಮಾಡಿದ ಇತಿಹಾಸ ಇದೆ. ಒನಕೆ ಓಬವ್ವಳನ್ನು ಚೂರಿ ಇರಿದು ಸಾಯಿಸಿದ ಹೈದರಾಲಿಯ ಮಗನ ಜಯಂತಿ ಆಚರಣೆ ಮಾಡುವುದು ಎಷ್ಟು ಸರಿ? ಮದಕರಿ ನಾಯಕನನ್ನ ವಿಷಹಾಕಿ ಸಾಯಿಸಿದ ಟಿಪ್ಪುವಿನ ಜಯಂತಿ ಆಚರಣೆ ಮಾಡುವುದು ದುರ್ಗದ ಜನರಿಗೆ ಮಾಡುವ ಅಪಮಾನ. ಇಷ್ಟೆಲ್ಲಾ ದೌರ್ಜನ್ಯ ಎಸಗಿದ ಟಿಪ್ಪುವಿನ ಜಯಂತಿ ಆಚರಿಸುವ ಮೂಲಕ ಅವನನ್ನು ಆದರ್ಶವಾಗಿಟ್ಟುಕೊಂಡರೆ ಬಿನ್ ಲ್ಯಾಡೆನ್ ನನ್ನು ಆದರ್ಶವಾಗಿಟ್ಟುಕೊಂಡಂತೆ. ಪೊಲೀಸರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವವರು ಯಾರು ಎಂಬುದನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕು. ಭಾರತದಲ್ಲಿ ಪಾಕಿಸ್ತಾನದ ಬಾವುಟ ಹಾರಿಸುತ್ತಿರುವವರು ಯಾರು ಎಂಬುದನ್ನು ತಿಳಿದುಕೊಳ್ಳಿ. ನಾವು ಕಾನೂನು ಉಲ್ಲಂಘನೆ ಮಾಡುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.