
ಬೆಂಗಳೂರು (ಜ.19): ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗುತ್ತಿದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ತಮ್ಮ ಪಕ್ಷದ ಎಷ್ಟು ಶಾಸಕರ ಗೆಲುವಿಗೆ ಹೆಲ್ಪ್ ಆಗುತ್ತೆ ಅನ್ನೋ ಲೆಕ್ಕಾಚಾರದಲ್ಲಿ ಮೂರು ಪಕ್ಷಗಳ ಪ್ರಮುಖ ನಾಯಕರ ತೊಡಗಿದ್ದಾರೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿದ್ದು, ಎರಡು ಕ್ಷೇತ್ರದಲ್ಲಿ ಕಣಕ್ಕಿಳಿಯುವ ಯೋಚನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಒಂದು ವರುಣಾ ಅಥವಾ ಚಾಮುಂಡೇಶ್ವರಿ ಮತ್ತೊಂದು ಉತ್ತರ ಕರ್ನಾಟಕದ ಒಂದು ಕ್ಷೇತ್ರ. ಕೊಪ್ಪಳ ಜಿಲ್ಲೆ, ಬಾಗಲಕೋಟೆ ಜಿಲ್ಲೆಯ ಸುರಕ್ಷಿತ ಕ್ಷೇತ್ರದಲ್ಲಿ ಕಣಕ್ಕಿಳಿಯುವ ಯೋಚನೆ ಸಿದ್ದರಾಮಯ್ಯರದ್ದಾಗಿದೆ. ಇದು ಉತ್ತರ ಕರ್ನಾಟಕ ಭಾಗ ದ ಇತರೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೂ ಸಹಾಯವಾಗಲಿದೆ ಎನ್ನುವ ಕಾರಣಕ್ಕೆ ಕಣಕ್ಕಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಆಪ್ತರು ಇಂತಹ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.