
ಬೆಂಗಳೂರು(ಫೆ.06): ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಸಮಾಜಕ್ಕೆ ಬೆಂಕಿ ಹಚ್ಚಲು ಯತ್ನಿಸುವ ಬಿಜೆಪಿ ಸಂಸದರಾದ ಪ್ರತಾಪ್‌ಸಿಂಹ, ಅನಂತಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ ಹಾಗೂ ನಳಿನ್‌ಕುಮಾರ್ ಕಟೀಲ್ ಅವರು ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸೋಮವಾರ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಯ ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಹಾಗೂ ಜೆಡಿಎಸ್‌ನ ಶಾಸಕರಾಗಿದ್ದ ದಿವಂಗತ ಚಿಕ್ಕಮಾದು ಪುತ್ರ ಅನಿಲ್ ಚಿಕ್ಕಮಾದು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಸಂಸದರಾದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಸಂಸದೆ ಶೋಭಾ ಕರಂದ್ಲಾಜೆ, ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಅವರನ್ನು ನೋಡಿ ವಿಜಯಶಂಕರ್‌ಗೆ ಬೇಸರವಾಗಿದೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಹಾಗೂ ಸಂವಿಧಾನ ಬದಲಿಸುತ್ತೇವೆ ಎಂಬ ಅವರ ಹೇಳಿಕೆಗಳು, ಕೋಮುಗಲಭೆ ಸೃಷ್ಟಿಸಿ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತು, ಸುಳ್ಳು ಹೇಳಿ ಪ್ರಚಾರ ಮಾಡಿ ಎಂಬ ಕೆ.ಎಸ್. ಈಶ್ವರಪ್ಪ ಮಾತುಗಳು ಬಿಜೆಪಿಯ ಸಂಸ್ಕೃತಿ ತೋರಿಸುತ್ತವೆ. ಇವರೆಲ್ಲಾ ಸಾರ್ವಜನಿಕ ಜೀವನದಲ್ಲಿರುವ ಅರ್ಹರಲ್ಲ ಎಂದು ಹೇಳಿದರು.
ಈಶ್ವರಪ್ಪಗೆ ನಾಲಿಗೆ ಹಾಗೂ ಮೆದುಳಿಗೆ ಸಂಪರ್ಕ ತಪ್ಪಿಹೋಗಿದೆ. ಬಿಜೆಪಿ ನಾಯಕರೆಲ್ಲಾ ಸುಳ್ಳು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.