
ಹಾಸನ(ಮೇ.21): ನನ್ನ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್ ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎನ್ನುವುದು ಅವರವರ ವೈಯಕ್ತಿಕ ಅಭಿಪ್ರಾಯ. ನನ್ನ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದ್ದು, ಸಿಎಂ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಅನ್ನೋದು ಅವರವರ ವೈಯಕ್ತಿಕ ಅಭಿಪ್ರಾಯ ಎಂದರು.
ಅನುರಾಗ್ ತಿವಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಯಾವುದೇ ರೀತಿಯ ತನಿಖೆ ವಹಿಸಿದರು ಅದಕ್ಕೆ ಸಹಕಾರ ನೀಡಲಾಗುವುದು.ಆಹಾರ ಇಲಾಖೆಯಲ್ಲಿ ಅವ್ಯವಹಾರ ನಡೆದಿದ್ದರೆ ತಿವಾರಿ ಬಹಿರಂಗ ಪಡಿಸಬಹುದಿತ್ತು, ಯಾಕೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.
ದಲಿತರ ಮನೆ ಉಪಹಾರ ನಾಟಕ. ಬಿಜೆಪಿ ನಾಯಕರದ್ದು ಡೋಂಗಿ ರಾಜಕೀಯ. ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ. ವರುಣಾ ಕ್ಷೇತ್ರದಲ್ಲಿ ತಮ್ಮ ಪೋಷಕರ ಪುತ್ರ ನಿಲ್ಲುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಜೆಡಿಎಸ್ ಪಕ್ಷ ತುಣಿಯಲು ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂಬ ಮಾಜಿ ಪ್ರಧಾನಿ ಹೆಚ್'ಡಿಡಿ ಆರೋಪವನ್ನು ಅಲ್ಲಗಳೆದ ಅವರು ಯಾರನ್ನು ಯಾರೂ ಹಣಿಯಲು ಸಾಧ್ಯವಿಲ್ಲ' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.