
ಬೆಂಗಳೂರು(ಸೆ.25): ವಿಶೇಷ ಅಧಿವೇಶನದಲ್ಲಿ ಸರ್ಕಾರದ ನಿರ್ಣಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿಗೆ ತುರ್ತಾಗಿ ಮಧ್ಯಂತರ ಅರ್ಜಿ ಸಲ್ಲಿಸುವಂತೆ ಕಾನೂನು ಪಂಡಿತರು ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಚಾರಗೋಷ್ಟಿಯಲ್ಲಿ ಮಾತಾಡಿದ ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರ್ನಹಳ್ಳಿ, ಸುಪ್ರೀಂ ಕೋರ್ಟಿನಲ್ಲಿ ಇದೇ 27ರಂದು ಕಾವೇರಿ ಪ್ರಕರಣ ವಿಚಾರಣೆಗೆ ಬರೋ ಮುನ್ನ ರಾಜ್ಯ ಸರ್ಕಾರ ತುರ್ತಾಗಿ ಮಧ್ಯಂತರ ಅರ್ಜಿ ಸಲ್ಲಿಸಿ ರಾಜ್ಯದ ಜಲಕ್ಷಾಮದ ಬಗ್ಗೆ ಮನವರಿಕೆ ಮಾಡಿಕೊಡಲಿ ಎಂದು ಸಲಹೆ ಕೊಟ್ಟಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ. ಆಚಾರ್ಯ ಮತ್ತು ಪ್ರೊ.ರವಿವರ್ಮ ಕುಮಾರ್, ಪ್ರಧಾನ ಮಂತ್ರಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದ್ರು.. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರಮೋದಿಯವರಿಗೆ ಪತ್ರ ಬರೆದು ಸರ್ಕಾರದ ನಿರ್ಣಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸದನ ನಿರ್ಣಯದ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಸೋಮವಾರ ಮಧ್ಯಂತರ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಇನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಇವತ್ತು ನವದೆಹಲಿಗೆ ತೆರಳಿ ರಾಜ್ಯದ ಪರ ವಕೀಲ ಫಾಲಿ ನಾರಿಮನ್ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಈ ಕುರಿತ ಸ್ಪಷ್ಟ ಚಿತ್ರಣ ಸೋಮವಾರ ಸುಪ್ರೀಂ ಕೋರ್ಟ್'ನಲ್ಲಿ ಸಿಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.