
ಮೈಸೂರು (ಸೆ.24): ಶರನ್ನವರಾತ್ರಿಯಲ್ಲಿ 9 ದಿನಗಳ ಕಾಲ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಸಿಎಂ ಪತ್ನಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶರನ್ನವರಾತ್ರಿ ನಾಲ್ಕನೇ ದಿನವಾದ ಇಂದು ಭಕ್ತೆಯಾಗಿರುವ ಸಿಎಂ ಪತ್ನಿ ಶರನ್ನವರಾತ್ರಿ ಮೊದಲ ದಿನ ಚಾಮುಂಡಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಆಗಮಿಸುವ ಮೊದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರತಿ ದಿನವೂ ಬೆಂಗಳೂರಿನಿಂದ ಬೆಳಗ್ಗಯೇ ಬಂದು ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನವರಾತ್ರಿಯ ಪೂಜೆ ಸಲ್ಲಿಸುತ್ತಿದ್ದು ಇಂದು ನಾಲ್ಕನೇ ದಿನವಾಗಿದ್ದು 9 ದಿನಗಳ ಕಾಲ ಪೂಜೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮುಂದಿನ ಬಾರಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ನವರಾತ್ರಿಯ ಪೂಜೆ ಕೈಗೊಂಡಿದ್ದಾರೆ ಎಂದು ಆಪ್ತ ಮೂಲಗಳು ಖಚಿತಪಡಿಸಿವೆ. ಇದಕ್ಕಾಗಿ ಪ್ರತಿ ದಿನ ಬೆಳಗ್ಗೆ ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ಹೊರಟು ಈ ನವರಾತ್ರಿ ಪೂಜೆಯಲ್ಲಿ ಪಾರ್ವತಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಇಂದು ಸಿಎಂ ಪತ್ನಿಯೊಂದಿಗೆ ಸಿಎಂ ಅವರ ಮೈಸೂರಿನ ಖಾಸಗಿ ಆಪ್ತ ಕಾರ್ಯದರ್ಶಿ ಕುಮಾರ್ ಜೊತೆಯಲ್ಲಿದ್ದರು.ಸಿಎಂ ಪತ್ನಿ ಪಾವರ್ತಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪತಿ ಸಿದ್ದರಾಮಯ್ಯ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಪತ್ನಿಯೊಂದಿಗೆ ಕುಟುಂಬದ ಸದಸ್ಯರು ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.