
ಲಖನೌ: ಗೋಸಾಗಣೆ ಮಾಡುವವರ ಮೇಲೆ ಗೋ ರಕ್ಷಣೆ ಹೆಸರಿನಲ್ಲಿ ನಡೆಯುವ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.
ಗೋ ರಕ್ಷಕರ ಹಾವಳಿ ಹಾಗೂ ದಾಂಧಲೆಗಳನ್ನು ತಡೆಯಲು ಗೋವು ಸಾಗಣೆ ಮಾಡುವವರಿಗೆ ಪ್ರಮಾಣ ಪತ್ರ ವಿತರಿಸಲು ಗೋವು ಸೇವಾ ಆಯೋಗಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸೂಚಿಸಿದ್ದಾರೆ. ಅಲ್ಲದೆ, ಇಂಥ ಪ್ರಮಾಣಪತ್ರ ಹೊಂದಿರುವ ಗೋ ಸಾಗಣೆದಾರರಿಗೆ ಭದ್ರತೆ ಒದಗಿಸುವುದು ಪೊಲೀಸರ ಜವಾಬ್ದಾರಿಯಾಗಿರಲಿದೆ ಎಂದು ತಿಳಿಸಿದ್ದಾರೆ.
ಚಿತ್ರಗೀತೆಗೆ ನಿಷೇಧ - ಭಜನೆಗೆ ಅವಕಾಶ : ಸಿಎಂ ಯೋಗಿ ಆದೇಶ
ಗೋವು ಸೇವಾ ಆಯೋಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಯೋಗಿ, ಗೋವುಗಳ ಅಕ್ರಮ ಸಾಗಣೆ ತಡೆಗೆ ಕ್ರಮ ಹಾಗೂ ಗೋವುಗಳ ಆಶ್ರಯ ತಾಣಗಳನ್ನು ನಿಯಮಿತವಾಗಿ ಪರಿಶೀಲನೆಗೊಳಪಡಿಸಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.