‘ಮೈಸೂರು-ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಚಿತ’

Published : Apr 26, 2019, 03:52 PM ISTUpdated : Apr 26, 2019, 04:03 PM IST
‘ಮೈಸೂರು-ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಚಿತ’

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳು ಗೆಲುವಿನ ಭರವಸೆಯಲ್ಲಿದ್ದಾರೆ.  ಈ ಎರಡು ಕ್ಷೇತ್ರ ಮೈತ್ರಿ ತೆಕ್ಕೆಗೆ ಸಿಗಲಿದೆ  ಎಂದು ಸಚಿವರು ಭವಿಷ್ಯ ಹೇಳಿದ್ದಾರೆ. 

ಮೈಸೂರು : ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇನ್ನೇನಿದ್ದರೂ ಫಲಿತಾಂಶದತ್ತ ಅಭ್ಯರ್ಥಿಗಳ ಕಾತರರಾಗಿದ್ದಾರೆ. ಅಲ್ಲದೇ ಪಕ್ಷಗಳು ಸಹ ತಮ್ಮದೇ ಗೆಲುವಿನ ಭರವಸೆಯಲ್ಲಿದ್ದಾರೆ.

ಮೈಸೂರಿನಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಸಚಿವ ಸಾ ರಾ ಮಹೇಶ್ ಮಂಡ್ಯ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ.  ಆದರೆ ಅಂತರ ಮಾತ್ರ ಕಡಿಮೆಯಾಗಬಹುದು.  ಮಂಡ್ಯ ಜನರ ಮೇಲೆ ನನಗೆ ನಂಬಿಕೆ ಇದೆ ಎಂದರು. 

ಕುಮಾರಸ್ವಾಮಿಯವರ 20 ತಿಂಗಳ ಆಡಳಿಡ ನಿಖಿಲ್ ಗೆಲುವಿಗೆ ಸಹಕಾರಿಯಾಗಲಿದೆ. ಈ ಬಾರಿ ಮಂಡ್ಯದಲ್ಲಿ ಫಲಿತಾಂಶ ಬದಲಾಗಲಿದೆ ಎಂದು ಮಾತನಾಡುತ್ತಾರೆ. ಅದೆಲ್ಲವೂ ಕೂಡ ಊಹಾಪೋಹಾ. ಇದೆಲ್ಲವನ್ನೂ ಕೂಡ ನಾವು ನಂಬುವುದಿಲ್ಲ. ಇದಕ್ಕೆಲ್ಲಾ ಮೇ 23ರ ನಂತರ ಉತ್ತರ ದೊರೆಯಲಿದೆ ಎಂದು ಸಚಿವ ಸಾ ರಾ ಮಹೇಶ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ