ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿಗಳಿಗೆ ಇನ್ನು ಕಾಲೇಜುಗಳಿಂದ ಫ್ರೆಂಡ್ ರಿಕ್ವೆಸ್ಟ್!

Published : Jul 08, 2019, 09:02 AM IST
ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿಗಳಿಗೆ ಇನ್ನು ಕಾಲೇಜುಗಳಿಂದ ಫ್ರೆಂಡ್ ರಿಕ್ವೆಸ್ಟ್!

ಸಾರಾಂಶ

ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿಗಳಿಗೆ ಇನ್ನು ಕಾಲೇಜುಗಳಿಂದ ಫ್ರೆಂಡ್ ರಿಕ್ವೆಸ್ಟ್!| ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಪತ್ರ

ನವದೆಹಲಿ[ಜು.08]: ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವೀಟರ್ ಅಥವಾ ಇನ್‌ಸ್ಟಾ ಗ್ರಾಂನಲ್ಲಿ ಖಾತೆ ಹೊಂದಿರುವ ಎಲ್ಲ ವಿದ್ಯಾರ್ಥಿಗಳು ಆಯಾ ಶಿಕ್ಷಣ ಸಂಸ್ಥೆಯ ಸಾಮಾಜಿಕ ಜಾಲತಾಣ ವೇದಿಕೆಯ ಜತೆ ಸಂಪರ್ಕ ಹೊಂದುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರವು ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದೆ.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಉತ್ತಮ ಕೆಲಸ ಗುರುತಿಸುವ ಭಾಗವಾಗಿ ಈ ಪ್ರಯತ್ನ ಎಂದು ಸರ್ಕಾರ ಹೇಳಿದೆ. ದೇಶದ 900 ವಿಶ್ವವಿದ್ಯಾ ಲಯಗಳು ಹಾಗೂ 40 ಸಾವಿರ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗುರುತಿಸಿಕೊಳ್ಳುವ ನಿರೀಕ್ಷೆಯಿದೆ.

ಆದರೆ ಸರ್ಕಾರದ ಈ ನಡೆ ವಿವಾದಕ್ಕೂ ಕಾರಣವಾಗಿದೆ. ತನಗೆ ವಿರುದ್ಧವಾದ ಸಿದ್ಧಾಂತ ಹೊಂದಿದ ವಿದ್ಯಾರ್ಥಿಗಳನ್ನು ಜಾಲತಾಣಗಳ ಮೂಲಕ ಗುರುತಿಸಿ ಬೋಧಕರ ಸಂದರ್ಶನದ ವೇಳೆ ಕಡೆಗಣಿಸುವ ದುಷ್ಟ ಸಂಚು ಇದಾಗಿದೆ ಎಂದು ಕೆಲವು ವಿದ್ವಾಂಸರು ದೂರಿದ್ದು, ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಸಂದರ್ಶನದ ವೇಳೆ ತಿರಸ್ಕರಿಸಲಾಗಿದೆ ಎಂಬ ದೂರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!