ಕರಾವಳಿ ‘ಕೆಂಡ’: ಕಾಂಗ್ರೆಸ್, ಬಿಜೆಪಿ ನಾಯಕರಿಂದ ರಾಜಕೀಯ ಕೆಸರೆರಚಾಟ

Published : Jul 09, 2017, 08:26 AM ISTUpdated : Apr 11, 2018, 01:09 PM IST
ಕರಾವಳಿ ‘ಕೆಂಡ’: ಕಾಂಗ್ರೆಸ್, ಬಿಜೆಪಿ ನಾಯಕರಿಂದ ರಾಜಕೀಯ ಕೆಸರೆರಚಾಟ

ಸಾರಾಂಶ

ಕೋಮು ದಳ್ಳುರಿಗೆ ಕರಾವಳಿ ಕೊತ ಕೊತ ಕುದಿಯುತ್ತಿದೆ. ಆದರೆ ಅಮಾಯಕರನ್ನು ಬಲಿ ಕೊಟ್ಟು ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳಲು ಒಬ್ಬರ ಮೇಲೊಬ್ಬರು ಆರೋಪ- ಪ್ರತ್ಯಾರೋಪ ಮಾಡುತ್ತಿದ್ದಾರೆ.

ಮಂಗಳೂರು(ಜು.09): ಕೋಮು ದಳ್ಳುರಿಗೆ ಕರಾವಳಿ ಕೊತ ಕೊತ ಕುದಿಯುತ್ತಿದೆ. ಆದರೆ ಅಮಾಯಕರನ್ನು ಬಲಿ ಕೊಟ್ಟು ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳಲು ಒಬ್ಬರ ಮೇಲೊಬ್ಬರು ಆರೋಪ- ಪ್ರತ್ಯಾರೋಪ ಮಾಡುತ್ತಿದ್ದಾರೆ.

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ಬಳಿಕ ಬಂಟ್ವಾಳದಲ್ಲಿ ಬೂದಿ ಮುಚ್ಚಿದ ಕೆಂಡದಂಥ ಪರಿಸ್ಥಿತಿ ನಿರ್ಮಾಣವಾಗಿದೆ.. ಕರಾವಳಿಯ ಈ ಪರಿಸ್ಥಿತಿಗೆ ನೀವು ಕಾರಣ. ನೀವು ಕಾರಣ ಅಂಥ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿವೆ. ಅಮಾಯಕರನ್ನು ಬಲಿ ಕೊಟ್ಟು  ಚುನಾವಣಾ ಹೊಸ್ತಿಲಲ್ಲಿ ವೋಟ್ ಬ್ಯಾಂಕ್'ಗಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಆರೋಪ - ಪ್ರತ್ಯಾರೋಪ ಮಾಡುತ್ತಿವೆ.

ಕರಾವಳಿಯಲ್ಲಿ ತಾರಕಕ್ಕೇರಿರೋ ಕೋಮು ದ್ವೇಷಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದರು ಹಾಗೂ ಕರಾವಳಿ ಭಾಗದಲ್ಲಿ ಎತ್ತಿಕಟ್ಟುವ ಕಾರ್ಯ ನಡೆಯುತ್ತಿದ್ದು, ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಇಂಥಾದೊಂದು ಆರೋಪ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದರು. ಕೋಮು ಗಲಭೆಗಳನ್ನು ಸಿಎಂ ನೇತೃತ್ವದ ಸರ್ಕಾರವೇ ಹುಟ್ಟು ಹಾಕುತ್ತಿದೆ. ಮಂಗಳೂರಲ್ಲಿ ಶಾಂತಿ ಕದಡಲು ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು. ಅಲ್ಲದೇ ಶರತ್ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ರು.

ಸದ್ಯ ಬಂಟ್ವಾಳದಲ್ಲಿ ಮುನ್ನೆಚ್ಚರಿಕೆಯಾಗಿ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ರಾಜಕೀಯ ನಾಯಕರು ಆರೋಪ ಪ್ರತ್ಯಾರೋಪ ಮಾಡುವುದನ್ನು ಬಿಟ್ಟು, ಶಾಂತಿ ನೆಲೆಸುವಂತೆ ಕಾರ್ಯಕ್ಕೆ ಮುಂದಾಗಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ