
ಬೆಂಗಳೂರು (ಡಿ.25): ನಿನ್ನೆ ಕೊಪ್ಪಳದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನೀಡಿದ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ, ಹಲವರು ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ, ಟಿ. ಶಶಿಧರ್ ಎಂಬುವರು ಅನಂತ್ ಕುಮಾರ್ ಹೆಗಡೆ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಿಂದ ಅನಂತ್ ಕುಮಾರ್ ಅವರನ್ನ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಹೆಗಡೆ ವಿರುದ್ಧ ಆರೋಪಿಸಿರುವ ಅವರು, ಕೇಂದ್ರ ಸಚಿವರು ಸಾರ್ವಜನಿಕವಾಗಿ ಜಾತ್ಯಾತೀತರ ವಿರುದ್ಧ ಅಸಾಂವಿಧಾನಿಕ ಪದಗಳನ್ನು ಪ್ರಯೋಗ ಮಾಡಿದ್ದು, ಭಾರತದ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನ ಬದಲಿಸಲು ಎನ್ನುವ ಮೂಲಕ ಸಮಾಜದಲ್ಲಿ ಒಡಕು ತರುವಂತತ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರಪತಿಯವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.