ಬಿಎಸ್‌ವೈ, ಬೋಪಯ್ಯ ವಿರುದ್ಧ ಉ.ಪ್ರ.ದಲ್ಲಿ ದೂರು

Published : May 26, 2018, 08:04 AM IST
ಬಿಎಸ್‌ವೈ, ಬೋಪಯ್ಯ ವಿರುದ್ಧ ಉ.ಪ್ರ.ದಲ್ಲಿ ದೂರು

ಸಾರಾಂಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಕೆ.ಜಿ. ಬೋಪಯ್ಯ ಕಳೆದ ಶನಿವಾರ ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ನ್ಯಾಯವಾದಿಯೊಬ್ಬರು ದೂರು ದಾಖಲಿಸಿದ್ದಾರೆ. 

ಲಖನೌ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಕೆ.ಜಿ. ಬೋಪಯ್ಯ ಕಳೆದ ಶನಿವಾರ ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ನ್ಯಾಯವಾದಿಯೊಬ್ಬರು ದೂರು ದಾಖಲಿಸಿದ್ದಾರೆ. 

ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಿದ್ದರೂ ಬಿಜೆಪಿ ಮುಖಂಡರಾದ ಯಡಿಯೂರಪ್ಪ ಮತ್ತು ಬೋಪಯ್ಯ ಸದನದಿಂದ ಹೊರ ನಡೆದಿದ್ದಾರೆ. 

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ವಿಧಾನಸಭೆಯಿಂದ ಹೊರ ನಡೆದಿದ್ದರು ಎಂದು ನ್ಯಾಯವಾದಿ ಜ್ಞಾನಪ್ರಕಾಶ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕುಂಡಾನ್ಯಾಯಾಲಯ ದೂರು ಸ್ವೀಕರಿಸಿದ್ದು, ಮುಂದಿನ ವಿಚಾರಣೆ ಮೇ 29ಕ್ಕೆ ನಿಗದಿಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?