ಪೇಜಾವರರ ಬಗ್ಗೆ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ದೂರು

First Published Jun 9, 2018, 8:48 AM IST
Highlights

ಪೇಜಾವರ ಶ್ರೀಗಳ ಹೇಳಿಕೆ ಬಗ್ಗೆ ಅಗೌರವಯುತವಾಗಿ ಪ್ರತಿಕ್ರಿಯಿಸಿ ಧಾರ್ಮಿಕ ಭಾವನೆಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಬೆಂಗಳೂರು :  ಪೇಜಾವರ ಶ್ರೀಗಳ ಹೇಳಿಕೆ ಬಗ್ಗೆ ಅಗೌರವಯುತವಾಗಿ ಪ್ರತಿಕ್ರಿಯಿಸಿ ಧಾರ್ಮಿಕ ಭಾವನೆಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ವಕೀಲ ನಟರಾಜ್‌ ಶರ್ಮಾ ಅವರಿಂದ ದೂರು ಸ್ವೀಕರಿಸಿರುವ ಪೊಲೀಸರು, ಈ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಶೋಭಾ ಹೇಳಿದ್ದೇನು?: ‘ಪೇಜಾವರ ಶ್ರೀಗಳು ಸನ್ಯಾಸಿ. ಅವರಿಗೆ ವಯಸ್ಸಾಗಿದೆ. ಶ್ರೀಗಳು ಟಿವಿ ನೋಡಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಶ್ರೀಗಳಿಗೆ ತಪ್ಪು ಮಾಹಿತಿ ಬಂದಿದೆ ಎಂದು ಸಂಸದರು ಹೇಳಿಕೆ ನೀಡಿದ್ದಾರೆ. ಸಂಸದರ ಈ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ’ ಎಂದು ವಕೀಲರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರವು ಗಂಗಾ ನದಿ ಶುದ್ಧೀಕರಣ ಯೋಜನೆ ಪೂರ್ಣಗೊಳಿಸಿಲ್ಲ ಹಾಗೂ ಕಪ್ಪು ಹಣ ತರುವಲ್ಲಿ ಸಹ ವಿಫಲವಾಗಿದೆ. ಈ ವಿಚಾರಗಳು ಮುಂದಿನ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎಂದು ಜೂ.3 ರಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಶ್ರೀಗಳ ಹೇಳಿಕೆ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದರು.

ಕೇಂದ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಶ್ರೀಗಳ ಹೇಳಿಕೆಗೆ ಸಂಸದೆ ಶೋಭಾ ಕರೆಂದ್ಲಾಜೆ ಅನುಚಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ವಕೀಲ ನಟರಾಜ್‌ ಶರ್ಮಾ ದೂರಿದ್ದಾರೆ.

click me!