ನಟ ಉಪೇಂದ್ರ ವಿರುದ್ಧ ದೂರು; ಬಂಧನಕ್ಕೆ ಆಗ್ರಹ

Published : Nov 03, 2017, 03:52 PM ISTUpdated : Apr 11, 2018, 12:51 PM IST
ನಟ ಉಪೇಂದ್ರ ವಿರುದ್ಧ ದೂರು; ಬಂಧನಕ್ಕೆ ಆಗ್ರಹ

ಸಾರಾಂಶ

ಮತದಾರರಿಗೆ ಹಣದ ಆಮಿಷವೊಡ್ಡಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಚಿತ್ರನಟ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ (ಕೆಪಿಜೆಪಿ) ನಾಯಕ ಉಪೇಂದ್ರ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ನಗರ ಜೆಡಿಯು ಘಟಕವು ಗುರುವಾರ ದೂರು ದಾಖಲಿಸಿದೆ.

ಬೆಂಗಳೂರು: ಮತದಾರರಿಗೆ ಹಣದ ಆಮಿಷವೊಡ್ಡಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಚಿತ್ರನಟ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ (ಕೆಪಿಜೆಪಿ) ನಾಯಕ ಉಪೇಂದ್ರ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ನಗರ ಜೆಡಿಯು ಘಟಕವು ಗುರುವಾರ ದೂರು ದಾಖಲಿಸಿದೆ.

ಆದರೆ ದೂರು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಎಫ್‌ಐಆರ್ ದಾಖಲಿಸಿಲ್ಲ. ನಗರದ ಗಾಂಧಿ ಭವನದಲ್ಲಿ ಅ.31ರಂದು ಅಧಿಕೃತವಾಗಿ ತಮ್ಮ ಪಕ್ಷದ ಉದ್ಘಾಟನಾ ಸಮಾರಂಭದಲ್ಲಿ ‘ಬೇರೆ ಪಕ್ಷಗಳ ಮುಖಂಡರು ಹಣ ನೀಡಿದರೆ ಜನರು ಆ ಹಣ ಪಡೆಯಲಿ. ಅದು ಅವರದೇ ಹಣ. ತಪ್ಪೇನಿಲ್ಲ’ ಎಂದು ಉಪೇಂದ್ರ ಹೇಳಿಕೆ ನೀಡಿದ್ದರು.

ಈ ಮೂಲಕ ಹಣ ಪಡೆದು ಮತ ಹಾಕಲು ಅವರು ಪ್ರಚೋದನೆ ನೀಡಿದಂತಾಗಿದೆ. ಅಲ್ಲದೆ, ಹಣದ ಆಮಿಷಕ್ಕೆ ತಮ್ಮ ಬೆಂಬಲವಿದೆ ಎಂಬುದಾಗಿ ಹೇಳಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಎಸಗಿದ ಅಪಚಾರವಾಗಿದೆ ಎಂದು ಬೆಂಗಳೂರು ನಗರ ಜೆಡಿಯು ಘಟಕದ ಪ್ರಧಾನ ಕಾರ್ಯದರ್ಶಿ ನಾಗೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

ಮತದಾರರಿಗೆ ಪ್ರಚೋದನೆ ನೀಡಿದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ನಾಯಕರನ್ನು ಕಾನೂನಿನಡಿ ಬಂಧಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!