
ಬೆಂಗಳೂರು : ರಾಜ್ಯ ರಾಜಕಾರಣದ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ಐಟಿ ಇಲಾಖೆಯಿಂದ ಮತ್ತೊಂದು ದೂರು ದಾಖಲಾಗಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ಈಗಾಗಲೇ 3 ಕೇಸ್ ದಾಖಲಿಸಿದ್ದು, ಇದೀಗ ಮತ್ತೊಂದು ದೂರು ದಾಖಲಾಗಿದೆ. ಕೋಟ್ಯಾಂತರ ರೂಪಾಯಿ ವ್ಯವಹಾರ ಮುಚ್ಚಿಟ್ಟು ತೆರಿಗೆ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಐಟಿ ಕಾಯಿದೆ ಸೆಕ್ಷನ್ 277, 278 ಹಾಗೂ ಐಪಿಸಿ ಸೆಕ್ಷನ್ 193, 199, 120(ಬಿ) ಅಡಿ ದೂರು ದಾಖಲು ಮಾಡಲಾಗಿದೆ.
ಡಿ.ಕೆ. ಶಿವಕುಮಾರ್ , ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ದೂರು ದಾಖಲಾಗಿದ್ದು, ಸಮನ್ಸ್ ಜಾರಿ ಮಾಡಲಾಗಿದೆ. ಆಗಸ್ಟ್ 2 ರಂದು ಡಿಕೆಶಿ ಸೇರಿ ಎಲ್ಲಾ ಆರೋಪಿಗಳು ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.
ಈ ಮೊದಲು ದಾಖಲಿಸಿರುವ ಕೇಸ್ ಗಳಲ್ಲಿ ಸಚಿವ ಡಿ.ಕೆ ಶಿವಕುಮಾರ್ ಅವರು ಜಾಮೀನು ಪಡೆದಿದ್ದು, ಇದೀಗ ದಾಖಲಾಗಿರುವ ಕೇಸ್‌ನಲ್ಲಿ ಡಿಕೆಶಿ ಗೆ ಬಂಧನ ಭೀತಿ ಎದುರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.