
ಬೆಂಗಳೂರು(ಆ.20): ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬಿಜೆಪಿಯನ್ನು ಕಟ್ಟಿಹಾಕಲು ಸಿದ್ದು ಸರ್ಕಾರ ಎಸಿಬಿ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ. ಯಡಿಯೂರಪ್ಪ ಕೊರಳಿಗೆ ಭೂಹಗರಣ ಉರುಳು ಸುತ್ತಲೇಬೇಕೆಂಬ ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಡಿನೋಟಿಫಿಕೇಷನ್ ಸಂಬಂಧ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆದು ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಿಸಿದೆ. ಒತ್ತಡಕ್ಕೆ ಮಣಿಯದ ಅಧಿಕಾರಿಯನ್ನ 2ನೇ ಆರೋಪಿಯಾಗಿಸಿ ಎಫ್ಐಆರ್ ದಾಖಲಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಎಸಿಬಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದು, ರಾಜ್ಯಪಾಲರಿಗೆ, ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ..?
ಆಗಸ್ಟ್ 10 ರಂದು ವಿಚಾರಣೆಗೆ ಕರೆದಿದ್ದ ಎಸಿಬಿ ಡಿವೈಎಸ್ಪಿಗಳಾದ ಬಾಲರಾಜ್ ಹಾಗೂ ಅಂಟೋನಿ ಜಾನ್ ಅವರು ನನ್ನನ್ನು ವಿಚಾರಣೆ ನಡೆಸಿದ್ದಾರೆ. ನಾನು ಹೇಳೇ ಇಲ್ಲದ ವಿಷಯಗಳನ್ನೆಲ್ಲಾ ಹೇಳಿಕೆಯನ್ನಾಗಿ ಬರೆದುಕೊಂಡ ಡಿವೈಎಸ್ಪಿ, ನನಗೆ ಬೆದರಿಕೆ ಹಾಕಿದ್ದಾರೆ. ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒತ್ತಡ ಹಾಕಿ ಡಿನೋಟಿಫೈ ಮಾಡಿದ್ದಾರೆ ಎಂದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತಾವು ಬರೆದುಕೊಂಡ ಹೇಳಿಕೆಗೆ ಒಪ್ಪಿಗೆ ಸೂಚಿಸುವಂತೆ ಎಸಿಬಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಅಲ್ಲದೆ, ಬಡ್ತಿಗೆ ತೊಂದರೆಯಾಗುತ್ತೆ ಎಂದು ಬೆದರಿಸಿದ್ದಾರೆ ಎಂದು ಬಸವರಾಜೇಂದ್ರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದಿದ್ದರೆ, ಸಿದ್ದರಾಮಯ್ಯ ಮಾತ್ರ ಈ ಬಗ್ಗೆಯೇ ನನಗೆ ಗೊತ್ತಿಲ್ಲ ಎಂಬ ುತ್ತರ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ವಿಷಯ ಮುಂದಿಟ್ಟುಕೊಂಡು ಹೋರಾಟಕ್ಕಿಳಿದ ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಸಿದ್ದರಾಮಯ್ಯ ಕೀಳು ಮಟ್ಟಕ್ಕೆ ಇಳಿದಿದ್ದಾರೆಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ತನಿಖಾ ಸಂಸ್ಥೆ ದುರುಪಯೋಗ ಮಾಡಿಕೊಂಡ ಸರ್ಕಾರ ವಿರುದ್ಧ ಹೋರಾಟ ನಡೆಸುವ ಸೂಚನೆಯನ್ನೂ ನೀಡಿದ್ದಾರೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.