ಕಿಡಿಗೇಡಿಗಳಿಂದ ಫೇಸ್‌ಬುಕ್‌ ನಲ್ಲಿ ದಾಳಿ ಸಮರ್ಥಿಸಿ ಸಂಭ್ರಮಾಚರಣೆ

Published : Feb 17, 2019, 10:33 AM IST
ಕಿಡಿಗೇಡಿಗಳಿಂದ ಫೇಸ್‌ಬುಕ್‌ ನಲ್ಲಿ ದಾಳಿ ಸಮರ್ಥಿಸಿ ಸಂಭ್ರಮಾಚರಣೆ

ಸಾರಾಂಶ

ಪುಲ್ವಾಮಾದಲ್ಲಿ ನಡೆದ ಉಗ್ರರ ಕೃತ್ಯವನ್ನು ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದೆ.

ಬೆಂಗಳೂರು :  ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಕೃತ್ಯವನ್ನು ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದೆ.

ಅಬೀಬ್‌ ಮಲ್ಲಿಕ್‌, ಅಬ್ದುಲ್‌ ಹನೀಫ್‌, ಸುಲ್ತಾನ್‌ ಅಹ್ಮದ್‌, ಸಲ್ಮಾನ್‌ ನಿಸಾರ್‌, ಅಮೀರ್‌ ಷರೀಫ್‌ ಹಾಗೂ ಉಮೇರ್‌ ಘೋಷ್‌ ಎಂಬ ವ್ಯಕ್ತಿಗಳು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಯೋಧರ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್‌ ಮಾಡಿದ್ದು, ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ನಾಗೇಶ್‌ ಎಂಬುವರು ದೂರು ನೀಡಿದ್ದಾರೆ.

ವಕೀಲರಿಂದ ದೂರು:

ಪುಲ್ವಾಮಾದಲ್ಲಿ ದಾಳಿಯನ್ನು ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ ಜಮ್ಮು-ಕಾಶ್ಮೀರ ಮೂಲದ ಅಬೀದ್‌ ಮಲಿಕ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ಐಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ವಕೀಲ ಉಮೇಶ್‌ ಕುಮಾರ್‌ ಶನಿವಾರ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ಮಾಡಿದ ಉಗ್ರನ ಪರವಾಗಿ ಪೋಸ್ಟ್‌ ಪ್ರಕಟ ಮಾಡಿರುವ ಅಬೀದ್‌ ಮಲಿಕ್‌, ಉಗ್ರನ ಫೋಟೋ ಹಾಕಿ ಆತನ ಪರವಾಗಿ ಶ್ರದ್ಧಾಂಜಲಿ ಅರ್ಪಿಸಿ ಇದು ನಿಜವಾದ ಸರ್ಜಿಕಲ… ಅಟ್ಯಾಕ್‌ ಎಂದು ಬರೆದುಕೊಂಡಿದ್ದಾನೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!