ಬಿಎಸ್'ವೈ ಸಮ್ಮುಖದಲ್ಲಿ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ

Published : Aug 29, 2017, 11:18 PM ISTUpdated : Apr 11, 2018, 12:39 PM IST
ಬಿಎಸ್'ವೈ ಸಮ್ಮುಖದಲ್ಲಿ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ

ಸಾರಾಂಶ

ನಾಯಕರುಗಳ ಅಸಮಾಧಾನ ಹೆಚ್ಚಾದಾಗ ಸಭೆಯಲ್ಲಿ ಹಾಜರಿದ್ದ ಸಂಸದ ಪ್ರತಾಪ ಸಿಂಹ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು

ಮೈಸೂರು(ಆ.29): ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಸ್ಥಳೀಯ ನಾಯಕರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ  ಮೈಸೂರು ನಗರ, ಗ್ರಾಮಾಂತರ ಜಿಲ್ಲಾ ನಾಯಕರುಗಳು ಸಿಂಹ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದರು. ಜಿಲ್ಲೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡ ಹೋಗುವ ಕೆಲಸ ಆಗ್ತಿಲ್ಲ. ಪಕ್ಷ ಸಂಘಟನೆ, ಕಾರ್ಯಕ್ರಮ, ಹೋರಾಟ ರೂಪಿಸುವಲ್ಲಿ ಪ್ರತಾಪ ಸಿಂಹ ಹಿಂದಿದ್ದಾರೆ. ಕೇವಲ ಕೆಲವೇ ನಾಯಕರನ್ನು ಕರೆದುಕೊಂಡು ನಿರ್ಣಯ ಕೈಗೊಳ್ಳುತ್ತಾರೆ. ಅನಗತ್ಯ ಹೇಳಿಕೆ ನೀಡಿ ಜಿಲ್ಲೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಎಸ್'ವೈ ಅವರಿಗೆ ದೂರು ನೀಡಿದರು.

ನಾಯಕರುಗಳ ಅಸಮಾಧಾನ ಹೆಚ್ಚಾದಾಗ ಸಭೆಯಲ್ಲಿ ಹಾಜರಿದ್ದ ಸಂಸದ ಪ್ರತಾಪ ಸಿಂಹ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್'ವೈ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ 7ರಲ್ಲಿ ಗೆಲ್ಲುವ ವಾತಾವರಣ ಇದೆ. ಹೀಗಾಗಿ ಟಾರ್ಗೆಟ್ 7 ಮುಟ್ಟಲೇಬೇಕು ಎಂದು  ಸೂಚನೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!