ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಿಶ್ಚಿತ: ಗಡ್ಕರಿ

Published : Apr 10, 2019, 08:21 AM IST
ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಿಶ್ಚಿತ: ಗಡ್ಕರಿ

ಸಾರಾಂಶ

ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ, ಮತ್ತೊಮ್ಮೆ ಬಹುಮತದೊಂದಿಗೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಷ್ಟೇ ಅಲ್ಲದೇ ತಮ್ಮ ಬಗ್ಗೆ ಹರಡಿರುವ ಗಾಳಿಸುದ್ದಿಯ ಬಗ್ಗೆಯೂ ಗಡ್ಕರಿ ತುಟಿ ಬಿಚ್ಚಿದ್ದಾರೆ. 

ನಾಗಪುರ[ಏ.10]: ಮಹತ್ವಾಕಾಂಕ್ಷೆಯುಳ್ಳ ಪ್ರಧಾನಿ ನರೇಂದ್ರ ಮೋದಿ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ ಎಂದು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಗಡ್ಕರಿ ಬಳಿ ಕೋಟ್ಯಾಂತರ ಮೌಲ್ಯದ ಆಸ್ತಿ: ಕಿರಿಯ ವಯಸ್ಸಿಗೆ ಸಿಕ್ಕಿತ್ತು BJP ಅಧ್ಯಕ್ಷನ ಪಟ್ಟ!

‘ದೇಶವನ್ನು ಸಮರ್ಥವಾಗಿ ಕಟ್ಟುವ ನಿಟ್ಟಿನಲ್ಲಿ ನನಗೆ ಉತ್ತಮ ಖಾತೆ ನೀಡಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಗಡ್ಕರಿ ಹೇಳಿದರು.

‘ಇನ್ನು ನನ್ನ ಆರ್‌ಎಸ್‌ಎಸ್‌ ನಂಟಿನ ಮುಖಾಂತರ ಹಾಗೂ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಗಡ್ಕರಿ ಬಿಜೆಪಿಯ ‘ಮುಂದಿನ ಪ್ರಧಾನಿ’ ಅಭ್ಯರ್ಥಿ ಎಂದು ಬಿಂಬಿತವಾಗುತ್ತಿರುವುದು ಕೇವಲ ವದಂತಿ’ ಎಂದು ಸ್ಪಷ್ಟಪಡಿಸಿದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು?
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!