ಲೋಕಸಭಾ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಿಂದಿರುವ ಉದ್ದೇಶವೇನು..?

Published : Jul 26, 2018, 12:00 PM IST
ಲೋಕಸಭಾ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಿಂದಿರುವ ಉದ್ದೇಶವೇನು..?

ಸಾರಾಂಶ

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದು ಇದರ ಹಿಂದೆ ಮಾಸ್ಟರ್ ಪ್ಲಾನ್ ತಯಾರಾಗಿದೆ. ಮೈತ್ರಿ ಮಾಡಿಕೊಂಡ ಪ್ರಮುಖ ಉದ್ದೇಶವೆಂದರೆ ಮೋದಿಯನ್ನು ಸೋಲಿಸುವುದೇ ಆಗಿದೆ. 

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಹೈಕಮಾಂಡ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಈ ಮೈತ್ರಿಗೆ ಎರಡೂ ಪಕ್ಷದವರೂ ಬದ್ಧವಾಗಿರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಸಂಬಂಧ ಈಗಾಗಲೇ ಕಾಂಗ್ರೆಸ್ ವರಿಷ್ಠರು ತೀರ್ಮಾನಿಸಿದ್ದಾರೆ. 

ಹಾಗಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈತ್ರಿಯಾದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್‌ನವರು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್‌ನವರು ಸಹಕಾರ ನೀಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅನಿವಾರ್ಯ. ಇದಕ್ಕೆ ಎರಡೂ ಪಕ್ಷಗಳೂ ಬದ್ಧವಾಗಿ ನಡೆದುಕೊಳ್ಳಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!