ಯಡಿಯೂರಪ್ಪ ಪ್ರಮಾಣವಚನ ಸಮಾರಂಭಕ್ಕೆ ದೋಸ್ತಿಗಳು ಬರಲ್ಲ!

By Web DeskFirst Published Jul 26, 2019, 4:12 PM IST
Highlights

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ಯಡಿಯೂರಪ್ಪ| ಇಂದು ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ| ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿರುವ ರಾಜ್ಯಪಾಲ ವಜುಭಾಯಿ ವಾಲಾ| ಪ್ರಮಾಣವಚನ ಸಮಾರಂಭಕ್ಕೆ ದೋಸ್ತಿಗಳು ಬರಲ್ಲ| ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರು ಗೈರು| ಟ್ವೀಟ್ ಮೂಲಕ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್| ಪಕ್ಷದ ಆದೇಶದ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಹೋಗಲ್ಲ ಎಂದ ಮಾಜಿ ಸಿಎಂ ಸಿದ್ದರಾಮಯ್ಯ| ಜೆಡಿಎಸ್ ನಾಯಕರಿಂದಲೂ ಬಿಎಸ್'ವೈ ಸಮಾರಂಭ ಬಹಿಷ್ಕಾರ|

ಬೆಂಗಳೂರು(ಜು.26): ಹೈಕಮಾಂಡ್ ಸ್ಪಷ್ಟ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಇಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಯಡಿಯೂರಪ್ಪ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

ಆದರೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗದಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ.

ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ.

ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ.

— Dinesh Gundu Rao / ದಿನೇಶ್ ಗುಂಡೂರಾವ್ (@dineshgrao)

ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಯಡಿಯೂರಪ್ಪ ಸಿಎಂ ಆಗುತ್ತಿದ್ದು, ತಾವೂ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭಧಲ್ಲಿ ಭಾಗವಹಿಸುವದಿಲ್ಲ ಎಂದು ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಯಡಿಯೂರಪ್ಪ ಪ್ರಮಾಣವಚನ ಸಮಾರಂಭಕ್ಕೆ ಹೋಗದಿರುವ ನಿರ್ಧಾರ ತಿಳಿಸಿದ್ದಾರೆ.

ಬಹುಮತ ಇಲ್ಲದೆ ಇದ್ದರೂ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು
ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು-
ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು.
ಸಂವಿಧಾನದ ಮೇಲೆ ಗೆ
ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

— Siddaramaiah (@siddaramaiah)

ಅದರಂತೆ ಜೆಡಿಎಸ್ ನಾಯಕರೂ ಕೂಡ ಯಡಿಯೂರಪ್ಪ ಪ್ರಮಾಣವವಚನ ಸ್ವೀಕಾರ ಸಮಾರಂಭ ಬಹಿಷ್ಕರಿಸಲಿದ್ದಾರೆ. ಮೈತ್ರಿ ಸರ್ಕಾರ ಉರುಳಲು ಕಾರಣರಾಗಿದ್ದಾರೆ ಎಂಬ ಅಸಮಾಧಾನದಿಂದ ದೋಸ್ತಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಲಿದ್ದಾರೆ ಎನ್ನಲಾಗಿದೆ.

click me!