
ಬೆಂಗಳೂರು [ಜು.08] : ರಾಜ್ಯ ರಾಜಕೀಯದಲ್ಲಿ ಸುನಾಮಿಯಂತೆ ರಾಜೀನಾಮೆ ಪರ್ವ ಎದ್ದಿದೆ. 13 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಎಲ್ಲಾ ಸಚಿವರು ಕೂಡ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಈ ರಾಜಕೀಯ ಪ್ರಹಸನಕ್ಕೆ ರಾಜ್ಯದ ಜನತೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಜೀನಾಮೆ ನೀಡಿದ ಶಾಸಕರ ವಿರುದ್ಧ ಇದೀಗ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ.
ಮತ ನೀಡಿದ ಮತದಾರರಿಗೆ ಬೆಲೆ ನೀಡದವರು ಎಂದು ರಾಜೀನಾಮೆ ನೀಡದ ಶಾಸಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಶಾಸಕರ ನಡೆ ವಿರುದ್ಧ ಜನತೆ ಆಕ್ರೋಶ ಹೊರಹಾಕುತ್ತಿದ್ದಾರೆ.
ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಮಹೇಶ್ ಕುಮಟಳ್ಳಿ, ಎಚ್. ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಹಲವರ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಫೇಸ್ ಬುಕ್ ಗಳಲ್ಲಿ ಹಾಕಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.